ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡುವ ಮೂಲಕ ಜಿ ರಾಮ ಜಿ ಎಂದು ನಾಮಕರಣವನ್ನು ಕಾಂಗ್ರೆಸ್ ಪಕ್ಷ ವಿರೋಧಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡುವ ಮೂಲಕ ಜಿ ರಾಮ ಜಿ ಎಂದು ನಾಮಕರಣವನ್ನು ಕಾಂಗ್ರೆಸ್ ಪಕ್ಷ ವಿರೋಧಿಸಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.ತಾಲೂಕಿನ ಕೊಣ್ಣೂರ ಗ್ರಾಮ ಗ್ರಾಪಂ ಆವರಣದಲ್ಲಿ ಸೋಮವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಗಾಂಧೀಜಿ ಬದಲಾಗಿ ಜಿ ರಾಮ ಜಿ ನಾಮಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಡವರಿಗೆ ಆರ್ಥಿಕ ಸಹಾಯ ನೀಡುವ ನಿಟ್ಟಿನಲ್ಲಿ ನರೇಗಾ ಯೋಜನೆ ಆರಂಭಿಸಿದ್ದು, ಅದು ಯಶಸ್ವಿಯಾಗಿ ನಡೆಯುತ್ತಿದೆ. ನೂರಾರು ಕುಟುಂಬಗಳಿಗೆ ಕೆಲಸವಿಲ್ಲದೆ ಗುಳೆ ಹೋಗುವ ಪರಿಸ್ಥಿತಿ ಕಡಿಮೆಯಾಗಿದೆ. ಕೇಂದ್ರ ಸರಕಾರದ ಹೊಸ ನೀತಿಯಲ್ಲಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಸುಮಿತ್ರಾ ಗುಳಬಾಳ ಮಾತನಾಡಿ, ಕಾಂಗ್ರೆಸ್ ಪಕ್ಷದ ಕನಸಿನ ಯೋಜನೆ ಮಹಾತ್ಮ ಗಾಂಧಿ ನರೇಗಾ ಯೋಜನೆ ಯಾವುದೇ ಪರಿಸ್ಥಿತಿಯಲ್ಲಿ ಹೆಸರು ಬದಲಾವಣೆ ಮಾಡದೇ ಮೂಲ ಸ್ಥಿತಿಯಲ್ಲಿಯೇ ಮುಂದುವರಿಸಬೇಕು. ಕೇಂದ್ರ ಸರಕಾರದ ನೀತಿಗಳಿಂದ ಯೋಜನೆ ದಾರಿ ತಪ್ಪಲಿದೆ. ಜನರಿಗೆ ಅನ್ಯಾಯವಾಗಲು ಕಾಂಗ್ರೆಸ್ ಪಕ್ಷ ಬಿಡುವದಿಲ್ಲ. ಹೋರಾಟಗಳು ನಿರಂತರವಾಗಿ ನಡೆಯಲಿವೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಪಾಟೀಲ, ಪ್ರಧಾನ ಕಾರ್ಯದರ್ಶಿ ರವಿ ಯಡಹಳ್ಳಿ, ಕಾಂಗ್ರೆಸ್ ಸಮೀತಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷ ಎನ್.ಬಿ. ಗಸ್ತಿ, ಪಿಕೆಪಿಎಸ್ (ಹೊಸ) ಅಧ್ಯಕ್ಷ ಕುತುಬುದ್ದಿನ್ ಪೆಂಡಾರಿ, ಪುಪ್ಪಾ ಕರಣಿ, ಕರಿಯಪ್ಪ ದಡ್ಡಿ, ಕಾಂಗ್ರೆಸ್ ಮುಖಂಡರಾದ ಆರ್.ಬಿ.ಜಾನಮಟ್ಟಿ, ರುಕ್ಮವ್ವ ಗಸ್ತಿ, ನಿಂಗಪ್ಪ ಏಣ್ಣಿ, ವಕೀಲ ಮಂಜುನಾಥ ದನಗರ, ಕರಿಯಪ್ಪ ಗಸ್ತಿ, ಗೀತಾ ಜಾಬೋಂಟಿ, ಕಾವೇರಿ ಪತ್ತಾರ, ಸತ್ಯವ್ವ, ಯಲ್ಲವ್ವ ಪಡಸಲಗಿ ಸಹಿತ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಿಕೆಪಿಎಸ್ ಸದಸ್ಯರು ಸಹಿತ ನರೇಗಾ ಯೋಜನೆಯ ಮಹಿಳಾ ಕಾರ್ಮಿಕರು ಪಾಲ್ಗೊಂಡಿದ್ದರು.
ನಂತರ ಗ್ರಾಪಂ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.