ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

| Published : Apr 17 2025, 12:04 AM IST

ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

Congress protests against misuse of investigation agencies

-ಅಂಚೆ ಕಚೇರಿಗೆ ಮುತ್ತಿಗೆಗೆ ಯುವ ಕಾಂಗ್ರೆಸ್‌ ಯತ್ನ। ಪೊಲೀಸರು, ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ । ಲಘು ಲಾಠಿ ಪ್ರಹಾರ

-----

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಾರಿನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರಿಗೂ ಮತ್ತು ಪ್ರತಿಭಟನಕಾರರಿಗೆ ಮಾತಿನ ಚಕಮಕಿ, ಲಘು ಲಾಠಿ ಪ್ರಹಾರ ನಡೆಯಿತು.

ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಪ್ರತಿಭಟನಕಾರರು ಖಂಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮುಂದುವರಿಸಿದೆ. ಇವರ ಒಡೆತನದಲ್ಲಿ ಇರುವ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನೇ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದು, ಈಗಾಗಲೇ ಸೋನಿಯಾಗಾಂಧಿ, ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿದೆ. ಇದನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ ಎಂದರು.

ಬ್ಲಾಕ್ ಕಾಂಗ್ರೆಸ್‌ನ ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಈ ತನಿಖೆ ಸಂಸ್ಥೆಗಳ ಜುಟ್ಟನ್ನು ತನ್ನ ಕೈನಲ್ಲಿ ಇಟ್ಟುಕೊಂಡು ಷಡ್ಯಂತ್ರದ ಮೂಲಕ ವಿರೋಧ ಪಕ್ಷಗಳನ್ನು ಬಗ್ಗು ಬಡಿಯಲು ಮುಂದಾಗಿದೆ ಎಂದರು.

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಪಿಎಲ್‌ಡಿಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್ ಪ್ರಮುಖರಾದ ಚೇತನ್, ಮಧುಸೂದನ್, ಇಮ್ರಾನ್, ಅಕ್ಬರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಚರಣ್, ಪ್ರವೀಣ್, ಗಿರೀಶ್, ಸಕ್ಲೇನ್, ಅನಿಲ್ ಪಾಟೀಲ್, ಧನುಷ್, ಮಲಗಪ್ಪ ಶಿವು, ಆಕಾಶ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ರವಿ ಕಟಿಕೆರೆ, ಚಂದ್ರ ಜಿ.ರಾವ್, ಸುಭಾನ್, ಅಭಿ, ಆದಿತ್ಯ, ವರುಣ್ ವಿ. ಪಂಡಿತ್ ಪಾಲ್ಗೊಂಡಿದ್ದರು.

--

....ಬಾಕ್ಸ್‌...

ಬಿ.ವೈ.ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಕೆ.ರಂಗನಾಥ್‌, ಎಚ್.ಪಿ. ಗಿರೀಶ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು. ಪ್ರವೀಣ್‌ಕುಮಾರ್, ಶರತ್‌ಮರಿಯಪ್ಪ, ಎಂ.ರಾಹುಲ್, ಎಸ್.ಬಸವರಾಜ್, ರಾಜೇಶ್ ಮಂದಾರ, ಮಂಜುನಾಥ್ ಪುರಲೆ, ದಿವಾಕರ್, ರಾಕೇಶ್, ನದೀಂ, ರಾಹೀಲ್, ಗುರುಪ್ರಸಾದ್ ಇದ್ದರು.

--

ಪೋಟೋ: 15ಎಸ್‌ಎಂಜಿಕೆಪಿ07

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಾರಿನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು.

------------------------

ಪೋಟೋ: 15ಎಸ್‌ಎಂಜಿಕೆಪಿ08

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಕೆ.ರಂಗನಾಥ್‌ ಹಾಗೂ ಎಚ್.ಪಿ. ಗಿರೀಶ್ ಅವರ ನೇತೃತ್ವದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.