ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

| Published : Oct 10 2025, 01:00 AM IST

ಸಿಜೆಐ ಮೇಲೆ ಶೂ ಎಸೆತ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ಆರ್‌. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು “ನ್ಯಾಯದ ಗೌರವ ಕಾಪಾಡಿ” ಎಂಬ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಕೇಶ್ ಕಿಶೋರ್ ಅವರ ಈ ನಡೆ ಕಾನೂನು ವೃತ್ತಿಯ ಮಾನಹಾನಿಗೆ ಕಾರಣವಾಗಿದ್ದು, ನ್ಯಾಯಾಂಗದ ಗೌರವವನ್ನು ಹಾಳು ಮಾಡುವ ಕಾರ್ಯ ಎಂದು ಆರೋಪಿಸಿದರು. ಅಂತಹ ವರ್ತನೆಗೆ ತಕ್ಕ ಶಿಕ್ಷೆ ನೀಡುವ ಮೂಲಕ ನ್ಯಾಯಾಂಗದ ಗೌರವವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ಆರ್‌. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡಿಸಿ ಹಾಸನ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ವಕೀಲರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ಘಟನೆಯನ್ನು ಕಟುವಾಗಿ ಖಂಡಿಸಿದರು. ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಜಯರಾಮ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಮಂಜುನಾಥ ಶರ್ಮ, ಹಿರಿಯ ವಕೀಲರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು “ನ್ಯಾಯದ ಗೌರವ ಕಾಪಾಡಿ” ಎಂಬ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ರಾಕೇಶ್ ಕಿಶೋರ್ ಅವರ ಈ ನಡೆ ಕಾನೂನು ವೃತ್ತಿಯ ಮಾನಹಾನಿಗೆ ಕಾರಣವಾಗಿದ್ದು, ನ್ಯಾಯಾಂಗದ ಗೌರವವನ್ನು ಹಾಳು ಮಾಡುವ ಕಾರ್ಯ ಎಂದು ಆರೋಪಿಸಿದರು. ಅಂತಹ ವರ್ತನೆಗೆ ತಕ್ಕ ಶಿಕ್ಷೆ ನೀಡುವ ಮೂಲಕ ನ್ಯಾಯಾಂಗದ ಗೌರವವನ್ನು ಉಳಿಸಬೇಕೆಂದು ಅವರು ಆಗ್ರಹಿಸಿದರು

ಈ ವೇಳೆ ಮಾತನಾಡಿದ ಅಧ್ಯಕ್ಷ ಜಯರಾಮ್, ನ್ಯಾಯಾಧೀಶರ ಮೇಲೆ ದಾಳಿ ಮಾಡುವುದು ಕೇವಲ ವ್ಯಕ್ತಿಗತ ದೌರ್ಜನ್ಯವಲ್ಲ, ಅದು ರಾಷ್ಟ್ರದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ದಾಳಿ. ಇಂತಹ ಘಟನೆಗಳು ಕಾನೂನು ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಕುಂದಿಸುತ್ತವೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ವಕೀಲರು ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಆರೋಪಿಯ ವಿರುದ್ಧ ತಕ್ಷಣವೇ ವಕೀಲರ ಪರವಾನಗಿ ರದ್ದುಪಡಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.