ವಿಕಲಚೇತನರೂ ಸ್ವಾವಲಂಬಿ ಜೀವನ ಸಾಗಿಸಿ

| Published : Dec 28 2024, 12:47 AM IST

ಸಾರಾಂಶ

ಕಲಚೇತನರೂ ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ಉತ್ತಮ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಇದಕ್ಕಾಗಿ ತಮಗಾಗಿ ಸರ್ಕಾರವು ಅನೇಕ ಸೌಲಭ್ಯವನ್ನು ಒದಗಿಸುತ್ತಿದ್ದು, ಅವುಗಳ ಪ್ರಯೊಜನವನ್ನು ಪಡೆದುಕೊಳ್ಳಬೇಕು ಎಂದು ಕಲಬುರಗಿಯ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಧೀಶ ನ್ಯಾ. ಕರಣ್ ಗುಜ್ಜರ್ ಹೇಳಿದರು.

ವಿಶ್ವ ಏಡ್ಸ್ ದಿನ, ಅಂಗವಿಕಲ ದಿನ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾ. ಕರಣ್ ಸಲಹೆ

ಕನ್ನಡ ಪ್ರಭ ವಾರ್ತೆ ಚಿತ್ತಾಪುರವಿಕಲಚೇತನರೂ ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ಉತ್ತಮ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಇದಕ್ಕಾಗಿ ತಮಗಾಗಿ ಸರ್ಕಾರವು ಅನೇಕ ಸೌಲಭ್ಯವನ್ನು ಒದಗಿಸುತ್ತಿದ್ದು, ಅವುಗಳ ಪ್ರಯೊಜನವನ್ನು ಪಡೆದುಕೊಳ್ಳಬೇಕು ಎಂದು ಕಲಬುರಗಿಯ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಧೀಶ ನ್ಯಾ. ಕರಣ್ ಗುಜ್ಜರ್ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತ ಹಾಗೂ ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ ಹಾಗೂ ಅಂತರಾಷ್ಟ್ರೀಯ ಅಂಗವಿಕಲ ದಿನ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ಎಲ್ಲಾ ವಿಕಲಚೇತನರೂ ಬೇರೆಯವರಿಗೆ ಅವಲಂಬಿತರಾಗುತ್ತಿದ್ದರು. ಆದರೆ ಸರ್ಕಾರವು ಈಗ ಅವರಿಗೆ ತ್ರಿಚಕ್ರ ವಾಹನ, ಸ್ವಯಂ ಉದ್ಯೊಗ ಕೈಗೊಳ್ಳಲು ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು, ಇದರಿಂದ ಅನೇಕರು ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ಈ ಸೌಲಭ್ಯವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದರು.ಅಧ್ಯಕ್ಷತೆ ವಹಿಸಿ ತಹಸೀಲ್ದಾರ್ ನಾಗಯ್ಯ ಹಿರೆಮಠ, ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಧೀಶರಾದ ನ್ಯಾ. ಕಿಶನ್ ಮಾಡಲಗಿ, ಸಿವಿಲ್ ನ್ಯಾಯಧೀಶರಾದ ನ್ಯಾ. ಸಂತೊಷಕುಮಾರ ದೈವಜ್ಞ ಮಾತನಾಡಿದರು. ನ್ಯಾಯವಾದಿ ಮಲ್ಲಿಕಾರ್ಜುನ ಹೊನಗುಂಟಿ ವಿಶ್ವ ಏಡ್ಸ್ ಕುರಿತು ಉಪನ್ಯಾಸ ನೀಡಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಅಂಜನಾದೇವಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗರಾಜ ಕಡಬೂರ, ತಾಲೂಕು ವೈಧ್ಯಾಧಿಕಾರಿ ಡಾ. ಸೈಯದ ಖಾದ್ರಿ ವೇದಿಕೆಯಲ್ಲಿದ್ದರು.