ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸೋನಿಯಾ,ಖರ್ಗೆ ಸೇರಿ 40 ಸ್ಟಾರ್‌ ಪ್ರಚಾರಕರು

| Published : Apr 01 2024, 12:49 AM IST / Updated: Apr 01 2024, 04:43 AM IST

Congress flag
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸೋನಿಯಾ,ಖರ್ಗೆ ಸೇರಿ 40 ಸ್ಟಾರ್‌ ಪ್ರಚಾರಕರು
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ರಾಜ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ.

 ಬೆಂಗಳೂರು : ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ರಾಜ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಪ್ರಕಟಿಸಿರುವ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸ್ಥಾನ ಪಡೆದಿದ್ದಾರೆ.

ಉಳಿದಂತೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ರಾಜ್ಯಸಭೆ ಸದಸ್ಯ ಜೈರಾಂ ರಮೇಶ್, ಲಕ್ಷ್ಮಣ್ ಸವದಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಪಿ.ಜಿ.ಆರ್.ಸಿಂಧ್ಯಾ, ಮಾಜಿ ಸಚಿವ ಬಿ.ಸೋಮಶೇಖರ್, ಕೆಪಿಸಿಸಿ ಉಪಾಧ್ಯಕ್ಷ ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್, ಸಯ್ಯದ್ ನಾಸೀರ್ ಹುಸೇನ್ ಅವರು ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಇನ್ನು ಅಂಬಣ್ಣ ಅರೊಳಿಕರ್, ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ವಿಧಾನಪರಿಷತ್ ಸದಸ್ಯರಾದ ಉಮಾಶ್ರೀ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವ ತನ್ವೀರ್ ಸೇಠ್ ಕೂಡ ಪಟ್ಟಿಯಲ್ಲಿ ಅವಕಾಶ ಪಡೆದಿದ್ದಾರೆ.