ಗಜೇಂದ್ರಗಡ: ರಾಜ್ಯ ಜನರ ಆರ್ಥಿಕ ಸುಧಾರಣೆಗಾಗಿ ಕಾಂಗ್ರೆಸ್ ಸರ್ಕಾರ ರೂಪಿಸಿದ ಪಂಚ ಗ್ಯಾರಂಟಿಗಳನ್ನು ದೇಶದೆಲ್ಲೆಡೆ ಜಾರಿಗೆ ತರಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಶರಣಪ್ಪ ಬೆಟಗೇರಿ ತಿಳಿಸಿದರು.

ಸ್ಥಳೀಯ ತಾಲೂಕು ಪಂಚಾಯಿತಿ ಚಿಂತನ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ೫ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಪಂಚ ಗ್ಯಾರಂಟಿ ಯೋಜನೆಯೂ ಒಂದಾಗಿದೆ. ೫ ಯೋಜನೆಗಳು ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸರ್ವ ಸದಸ್ಯರು ಕೆಲಸ ಮಾಡಬೇಕಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಯೋಜನೆಗಳನ್ನು ಘೊಷಿಸಿದಾಗ ಅದು ಹೇಗೆ ಸಾಧ್ಯ ಟೀಕಿಸಿದ್ದ ವಿಪಕ್ಷಗಳು ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ನಕಲು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಒಪ್ಪಿಕೊಂಡಿವೆ. ರಾಜ್ಯದ ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಎಲ್ಲರೂ ಪಡೆಯುತ್ತಿದ್ದಾರೆ. ಇನ್ನೂ ಅಲ್ಲಲ್ಲಿ ಉಳಿದವರಿಗೆ ಮಾಹಿತಿ ನೀಡಿ ಯೋಜನೆ ತಲುಪಿಸಬೇಕು ಎಂದರು.ಗ್ಯಾರಂಟಿ ಯೋಜನೆಯ ಐದು ಇಲಾಖೆಗಳ ಅಧಿಕಾರಿಗಳ ತಾಲೂಕಿನ ಮಾಹಿತಿ ಪಡೆದುಕೊಂಡು ಯೋಜನೆ ಗುರಿ ಸಾಧಿಸಲು ತಿಳಿಸಿದರು.ಈ ವೇಳೆ ಗ್ಯಾರಂಟಿ ಸಮಿತಿಯ ಮಲ್ಲಿಕಾರ್ಜುನ ಗಾರಗಿ, ಇಮಾಮಸಾಬ ಬಾಗವಾನ, ಸದಸ್ಯರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ(ಪಂ.ರಾ.), ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಅಧಿಕಾರಿಗಳು ಇದ್ದರು.