ಸಾರಾಂಶ
ಮಡಿಕೇರಿ: ಕಾಂಗ್ರೆಸ್ ಸೇವಾದಳದ ಸಂಸ್ಥಾಪಕ ಎನ್.ಎಸ್.ಹರ್ಡೀಕರ್ ಅವರ 136ನೇ ಜನ್ಮದಿನವನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸೇವಾದಳದ ಜಿಲ್ಲಾಧ್ಯಕ್ಷ ಕಾನೇಹಿತ್ಲು ಮೊಣ್ಣಪ್ಪ ಮಾತನಾಡಿ ಕಾಂಗ್ರೆಸ್ ಸೇವಾದಳದ ಸ್ಥಾಪನೆ ಮತ್ತು ಅದು ಬೆಳೆದು ಬಂದ ರೀತಿಯನ್ನು ವಿವರಿಸಿದರು. ಸೇವಾದಳದ ಮಾಜಿ ರಾಜ್ಯಾಧ್ಯಕ್ಷೆ ಜಯಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಉಪಾಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ ಹಾಗೂ ಭಾರತ್ ಸೇವಾದಳದ ಮುಖ್ಯ ಸಂಚಾಲಕಿ ರೇವತಿ ರಮೇಶ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷ ವಿ.ಜಿ.ಮೋಹನ್, ರಾಜ್ಯ ಸೇವಾದಳದ ಪ್ರಧಾನ ಕಾರ್ಯದರ್ಶಿ ತೆರೇಸ ವಿಕ್ಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ಗ್ಯಾರಂಟಿ ಯೋಜನೆಯ ಸದಸ್ಯ ಹರಿಪ್ರಸಾದ್ ಕೋಚನ, ನಗರಸಭಾ ನಾಮ ನಿರ್ದೇಶಿತ ಸದಸ್ಯ ಯಾಕುಬ್, ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಮುಖರಾದ ಮುನೀರ್ ಮಾಚರ್, ವಸಂತ್ ಭಟ್, ಕೌಸರ್, ಸೇವಾದಳದ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಪಿ.ಜಿ.ರಾಜಶೇಖರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜ್, ರಿಯಾಜ್, ಸೇವಾದಳದ ಮಡಿಕೇರಿ ಪ್ರಧಾನ ಕಾರ್ಯದರ್ಶಿ ಹಬೀಬ್, ಅಜೀಜ್, ನಾಪೋಕ್ಲು ಸೇವಾದಳದ ಪ್ರಧಾನ ಕಾರ್ಯದರ್ಶಿ ಧ್ರುವ ಪೂಜಾರೀರ, ಸೈಮನ್, ಮಹಮ್ಮದ್ ಎಮ್ಮೆಮಾಡು, ಅರ್ಜುನ್ ರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.