ವಿಬಿ ಜಿ ರಾಮ್ ಜಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. 20 ವರ್ಷಗಳ ಹಿಂದೆ ನರೇಗಾ ಯೋಜನೆಯನ್ನು ಕಾಂಗ್ರೆಸ್ ಜಾರಿಗೆ ತಂದಿತ್ತು. ಆದರೆ ಈ ಯೋಜನೆಯ ಕೆಲವು ಲೋಪದೋಷಗಳನ್ನು ತಿದ್ದುಪಡಿ ಮಾಡಿ 100 ದಿನದ ಕೆಲಸದ ಬದಲು 125 ದಿನಕ್ಕೆ ಹೆಚ್ಚಿಸಿ ಇದನ್ನು ಜಾರಿಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಹಾವೇರಿ:ವಿಬಿ ಜಿ ರಾಮ್ ಜಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. 20 ವರ್ಷಗಳ ಹಿಂದೆ ನರೇಗಾ ಯೋಜನೆಯನ್ನು ಕಾಂಗ್ರೆಸ್ ಜಾರಿಗೆ ತಂದಿತ್ತು. ಆದರೆ ಈ ಯೋಜನೆಯ ಕೆಲವು ಲೋಪದೋಷಗಳನ್ನು ತಿದ್ದುಪಡಿ ಮಾಡಿ 100 ದಿನದ ಕೆಲಸದ ಬದಲು 125 ದಿನಕ್ಕೆ ಹೆಚ್ಚಿಸಿ ಇದನ್ನು ಜಾರಿಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ವಿಬಿ ಜಿ ರಾಮ್ ಜಿ ಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನರೇಗಾದ ಮೂಲ ವೇತನಕ್ಕೆ 20 ರು. ಹೆಚ್ಚಿಸಲಾಗಿದೆ. ಆ ಮೂಲಕ ವಿಕಸಿತ ಭಾರತ 2047ಕ್ಕೆ ಭದ್ರ ಅಡಿಪಾಯ ಹಾಕಲಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹರಡುವ ಮೂಲಕ ಅಪಪ್ರಚಾರ ಮಾಡುತ್ತಿದೆ. ಆದರೆ ದೇಶದ ಜನರು ಕೇಂದ್ರ ಸರ್ಕಾರದ ಯೋಜನೆಗಳನ್ನು ಮನಃಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಎಷ್ಟೇ ಪ್ರಯತ್ನಿಸಿದರೂ ಜನರನ್ನು ತಪ್ಪು ದಾರಿಗೆ ಎಳೆಯಲು ಸಾಧ್ಯವಿಲ್ಲ ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಬಿ ಜಿ ರಾಮ್ ಜಿ ಜನಜಾಗರಣ ಅಭಿಯಾನದ ಜಿಲ್ಲಾ ಸಂಚಾಲಕ ಡಾ. ಸಂತೋಷ ಆಲದಕಟ್ಟಿ ಮಾತನಾಡಿ, ಯೋಜನೆಯ ಸಂಪೂರ್ಣ ಮಾಹಿತಿಯನ್ನು ಚರ್ಚಿಸಿ, ಮುಂಬರುವ ದಿನಗಳಲ್ಲಿ ಪಕ್ಷದ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ, ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಪಟ್ಟಣ ಪಂಚಾಯತಿ, ಪುರಸಭೆ, ಎಪಿಎಂಸಿ, ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಜಿಲ್ಲಾ ಸಮಾವೇಶ, ತಾಲೂಕು ಸಮಾವೇಶ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಿಸಾನ್ ಚೌಪಾಲ್ ಅಭಿಯಾನ ನಡೆಸುವ ಮೂಲಕ ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿ ಯೋಜನೆಯ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸೀಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ, ಮಂಜುನಾಥ ಗಾಣಿಗೇರ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ ಹಾಗೂ ವಿವಿಧ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭಿಯಾನದ ಜಿಲ್ಲೆ ಹಾಗೂ ಮಂಡಲ ಸಂಚಾಲಕರು, ಸಹ ಸಂಚಾಲಕರು, ಪ್ರಕೋಷ್ಠದ ಸಂಚಾಲಕರು ಇದ್ದರು.