ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಸಿಹಿ ಹಂಚಿ ಸಂತಸ ವಿನಿಮಯ ಮಾಡಿಕೊಂಡರು.ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್, ಬಿಜೆಪಿಯವರು ಹಬ್ಬಿಸಿದ ಸುಳ್ಳುಗಳ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಸಂಡೂರು ಹೊರತುಪಡಿಸಿ ಎರಡು ಕಡೆ ಕಾಂಗ್ರೆಸ್‌ಗೆ ಹೆಚ್ಚುವರಿಯಾಗಿ ಎರಡು ಸೀಟುಗಳು ಲಭ್ಯವಾಗಿವೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳಿಗೆ ಜನತೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, ಕರ್ನಾಟಕದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಉಪ ಚುನಾವಣೆಯಲ್ಲಿ ಸೋತಿರುವುದು ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಮುಡಾ, ವಕ್ಫ್ ವಿಚಾರದಲ್ಲಿ ಏನೆಲ್ಲ ಅಪಪ್ರಚಾರ ಮಾಡಿದರೂ ಜನ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇದು ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.ಗ್ಯಾರಂಟಿ ಯೋಜನೆ ಜಿಲ್ಲಾ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಮುದಸಿರ್, ಖುದ್ದೂಸ್, ಚಿದಾನಂದ್, ಚೋಟು, ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.----------
ಪೋಟೋ ಕ್ಯಾಪ್ಸನ್ಉಪ ಚುನಾವಣೆಯಲ್ಲಿ ಜಯಬೇರಿ ಬಾರಿಸಿದ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಿಸಿದರು.
-----------ಫೋಟೋ ಪೈಲ್ ನೇಮ್- 23 ಸಿಟಿಡಿ8-------------------ಸಿದ್ದು ಕೆಣಕಿದ್ದಕ್ಕೆ ಜನರಿಂದ ತಕ್ಕ ಉತ್ತರಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಣಕಿದ್ದಕ್ಕೆ ಉಪ ಚುನಾವಣೆಯಲ್ಲಿ ಜನತೆ ಪ್ರತಿಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಹೆಚ್.ಆಂಜನೇಯ ಹೇಳಿದ್ದಾರೆ.ಉಪ ಚುನಾವಣೆ ಫಲಿತಾಂಶ ಹೊರ ಬಿದ್ದ ನಂತರ ಮಾತನಾಡಿರುವ ಅವರು, ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ. 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ ಮುನ್ನೆಲೆಗೆ ತಂದ ಪ್ರತಿಪಕ್ಷಗಳ ನಡೆಗೆ ಉಪ ಚುನಾವಣೆಯಲ್ಲಿ ಜನಾಕ್ರೋಶ ಹೊರಬಿದ್ದಿದೆ ಎಂದಿದ್ದಾರೆ.ಮುಡಾ ಹೆಸರಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿ, ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡುವ ಯತ್ನ ಹಾಗೂ ಅಹಿಂದ ನಾಯಕನೊಬ್ಬ ಎರಡನೇ ಬಾರಿ ಸಿಎಂ ಆಗಿ ಅವಧಿ ಪೂರ್ಣಗೊಳಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುವ ಪ್ರತಿಪಕ್ಷಗಳ ಷಡ್ಯಂತ್ರವನ್ನು ಸಹಿಸಿಕೊಳ್ಳುವುದಿಲ್ಲವೆಂಬ ಸಂದೇಶವನ್ನು ಮತದಾರರೇ ರವಾನಿಸಿದ್ದಾರೆ ಎಂದರು.ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಹಾಗೂ ಐದು ಗ್ಯಾರಂಟಿಗಳು ಜಾರಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಆದೇಶ ಸೇರಿ ಅನೇಕ ಕ್ರಾಂತಿಕಾರಿ ನಡೆ ಕೈಗೊಂಡ ಸಿದ್ದರಾಮಯ್ಯ ನಾಯಕತ್ವ ಪ್ರಶ್ನಾತೀತ ಎಂಬ ಸಂದೇಶವನ್ನು ಜನರು ಫಲಿತಾಂಶದ ಮೂಲಕ ಸಾರಿದ್ದಾರೆ.ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ನಡೆಸಿ ಅಧಿಕಾರದಿಂದ ಕೆಳಗಿಸುವ ಕುತಂತ್ರಕ್ಕೆ ಅಹಿಂದ ವರ್ಗದ ಜನರು ಸಿಡಿದೆದ್ದು, ರಾಜ್ಯದಲ್ಲಿ ಮತ್ತಷ್ಟು ಗಟ್ಟಿಗೊಂಡಿದ್ದಾರೆ. ಅದರ ಫಲವೇ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚು ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದಿದ್ದಾರೆ.ಜತೆಗೆ ವೀರಶೈವ ಲಿಂಗಾಯತ, ಒಕ್ಕಲಿಗ ಮತಗಳನ್ನು ಕೂಡ ಕಾಂಗ್ರೆಸ್ ಪಕ್ಷ ಪಡೆದುಕೊಳ್ಳುವಲ್ಲಿ ಯಶಸ್ಸು ಕಂಡಿದೆ. ಶಿಗ್ಗಾವಿ, ಸಂಡೂರಲ್ಲಿ ಹೆಚ್ಚು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು ಕೂಡ ಕೈಹಿಡಿದಿರುವುದು ಪಕ್ಷದ ಗೆಲುವಿಗೆ ಸಹಕಾರಿ ಆಗಿದೆ ಎಂದು ಆಂಜನೇಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.-----------ಫೋಟೋ ಫೈಲ್ ನೇಮ್- ಆಂಜನೇಯ------.