ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಒಳ್ಳೆಯ, ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಈ ಸಲ ನಮ್ಮ ಅಭ್ಯರ್ಥಿ ಒಳ್ಳೆಯ ಬಹುಮತದಿಂದಲೇ ಗೆಲ್ಲುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- ಸ್ಟಿಂಗ್ ಆಪರೇಷನ್ ಆಗಬಾರದು, ಅದು ನಮ್ಮ ಸಂಸ್ಕೃತಿ, ಸಂಸ್ಕಾರ ಅಲ್ಲ ಎಂದ ಸಚಿವ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಒಳ್ಳೆಯ, ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಈ ಸಲ ನಮ್ಮ ಅಭ್ಯರ್ಥಿ ಒಳ್ಳೆಯ ಬಹುಮತದಿಂದಲೇ ಗೆಲ್ಲುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ವಿ.ಪ. ಚುನಾವಣೆಯಲ್ಲಿ ಪತ್ನಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಜೊತೆಗೆ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾವು ಮತ ಚಲಾಯಿಸುವ ಹೊತ್ತಿಗೆ ಕ್ಷೇತ್ರದಲ್ಲಿ ಶೇ.60ರಷ್ಟು ಮತದಾನವಾಗಿದ್ದು, ಒಳ್ಳೆಯ ಮತ ಚಲಾವಣೆಯಾಗುವ ಸಾಧ್ಯತೆ ಇದೆ ಎಂದರು.

ಹೆಚ್ಚಿನ ಬಹುಮತದಿಂದ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆನ್ನುವ ಭರವಸೆಯಿದೆ. ನಮ್ಮ ಕಾರ್ಯಕರ್ತರು ಪ್ರತಿಯೊಬ್ಬ ಮತದಾರರ ಬಳಿಯೂ ಹೋಗಿ ಮತ ಕೇಳಿದ್ದಾರೆ. ನಮ್ಮ ಪಕ್ಷ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ಇದು ನೂರಕ್ಕೆ ನೂರರಷ್ಟು ಮುಂದಿನ ಚುನಾವಣೆಗೆ ದಿಕ್ಸೂಚಿಯೂ ಆಗಲಿದೆ ಎಂದು ಅವರು ತಿಳಿಸಿದರು.

ಬೆಳಗ್ಗೆಯಿಂದಲೇ ಹುರುಪಿನಿಂದ ಮತದಾನ ನಡೆಯುತ್ತಿದೆ. ನಮ್ಮ ಕಾಂಗ್ರೆಸ್ ಪಕ್ಷದಿಂದ ಸೂಕ್ತ, ಒಳ್ಳೆಯ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಈ ಸಲ ನಮ್ಮ ಅಭ್ಯರ್ಥಿ ಒಳ್ಳೆಯ ಬಹುಮತದಿಂದ ಗೆಲ್ಲುತ್ತಾರೆ. ಕಳೆದ ಚುನಾವಣೆಗಿಂತಲೂ ಈ ಸಲ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿರುವುದು ಕಂಡುಬರುತ್ತಿದೆ ಎಂದು ಅವರು ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಮಹಿಳೆಯೊಬ್ಬರ ಕೈವಾಡವಿರುವ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನನಗೆ ಅಷ್ಟೊಂದು ಐಡಿಯಾ ಇಲ್ಲ. ಸ್ಟಿಂಗ್‌ ಆಪರೇಷನ್, ಹನಿ ಟ್ರ್ಯಾಪ್ ಅದೆಲ್ಲಾ ಆಗಬಾರದು. ಅದು ನಮ್ಮ ಸಂಸ್ಕೃತಿ, ಸಂಸ್ಕಾರ ಅಲ್ಲ. ಸ್ಟಿಂಗ್‌ನಲ್ಲಿ ಮೊಬೈಲ್‌ ವೀಡಿಯೋಗಳು ಬಂದವು, ಕ್ಯಾಮೆರಾಗಳು ವ್ಯಾನಿಟಿ ಬ್ಯಾಗ್‌, ಬಟನ್‌ಗಳಲ್ಲಿ ಬಂದವು. ಇದೆಲ್ಲಾ ಆಗಬಾರದು. ಅಂತಹದ್ದೆಲ್ಲಾ ನಮ್ಮ ಸಂಸ್ಕಾರ ಅಲ್ಲ ಎಂದು ಹೇಳಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನಂದಿನ ಹಾಲಿನ ದರ ಹೆಚ್ಚಿಸುವ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ಕ್ಯಾಬಿನೆಟ್‌ನಲ್ಲಿ ಈ ವಿಚಾರದ ಬಗ್ಗೆ ಚರ್ಚೆಸಲಾಗುವುದು. ರಾಜ್ಯದ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ₹1200 ಕೋಟಿಯಷ್ಟು ಪರಿಹಾರ ನೀಡಲಾಗಿದೆ. ರೈತರಿಗೆ ಸೌಲಭ್ಯ ಕಲ್ಪಿಸುವ ಕೆಲಸವನ್ನು ಬ್ಯಾಂಕ್‌ಗಳು ಮಾಡುತ್ತಿವೆ. ಎಲ್ಲರೂ ಕುಳಿತು ಸೂಕ್ತ ವ್ಯಕ್ತಿಯನ್ನು ದಾವಣಗೆರೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ ಮಾಡುವ ಕೆಲಸ ಮಾಡುತ್ತೇವೆ ಎಂದು ಅವರು ವಿವರಿಸಿದರು.

ಮೈಸೂರು ದಸರಾದಲ್ಲಿ ಸಚಿವರನ್ನು ಪೊಲೀಸ್ ಅಧಿಕಾರಿಯೊಬ್ಬರು ತಡೆದ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಸಿಎಸ್‌ಗೆ ಸೂಚನೆ ನೀಡಿದ್ದಾರೆ. ಏನಾಗಿದೆ ಎಂಬುದು ವರದಿ ಬಂದ ಮೇಲೆ ಸಿಎಸ್ ಈ ಬಗ್ಗೆ ತಿಳಿಸಲಿದ್ದಾರೆ ಎಂದು ಎಸ್‌.ಎಸ್‌. ಮಲ್ಲಿಕಾರ್ಜುನ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

- - -

(ಕೋಟ್‌)

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಕಳೆದ 8 ತಿಂಗಳಿನಿಂದ ನಿರಂತರವಾಗಿ ಚುನಾವಣೆ ಕೆಲಸ ಮಾಡಿದ್ದಾರೆ. ನಮಗೆ ಸಂಪೂರ್ಣ ವಿಶ್ವಾಸವಿದೆ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. ಫಲಿತಾಂಶದ ದಿನ ನಿಮಗೆ ಗೊತ್ತಾಗಲಿದೆ.

- ಡಾ.ಪ್ರಭಾ ಮಲ್ಲಿಕಾರ್ಜುನ, ದಾವಣಗೆರೆ ಸಂಸದೆ.

- - -

-23ಕೆಡಿವಿಜಿ10: ದಾವಣಗೆರೆ ಹೈಸ್ಕೂಲ್ ಮೈದಾನದ ಡಯಟ್ ಕಾಲೇಜು ಮತ ಕೇಂದ್ರಕ್ಕೆ ಮತ ಚಲಾಯಿಸಲು ಆಗಮಿಸಿದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

- - -

-23ಕೆಡಿವಿಜಿ11: ದಾವಣಗೆರೆ ಹೈಸ್ಕೂಲ್ ಮೈದಾನದ ಡಯಟ್ ಕಾಲೇಜು ಮತ ಕೇಂದ್ರದಲ್ಲಿ ಮತ ಚಲಾಯಿಸಿದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

- - -

-23ಕೆಡಿವಿಜಿ12: ದಾವಣಗೆರೆ ಹೈಸ್ಕೂಲ್ ಮೈದಾನದ ಡಯಟ್ ಕಾಲೇಜು ಮತ ಕೇಂದ್ರದಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

- - -

-23ಕೆಡಿವಿಜಿ13: ದಾವಣಗೆರೆ ಹೈಸ್ಕೂಲ್ ಮೈದಾನದ ಡಯಟ್ ಕಾಲೇಜು ಮತ ಕೇಂದ್ರದಲ್ಲಿ ಮತ ಚಲಾಯಿಸಿದ ನಂತರ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೊರಬರುತ್ತಿರುವುದು.

- - -