ಸಾರಾಂಶ
ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ೫ ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಯಳಂದೂರು : ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ 5ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಈ ಬಾರಿ ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ಭಾನುವಾರ ಯರಗಂಬಳ್ಳಿ, ಗುಂಬಳ್ಳಿ, ಕುಮಾರನಪುರ, ಯರಿಯೂರು ಗ್ರಾಪಂ ವ್ಯಾಪ್ತಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಸುನೀಲ್ ಬೋಸ್ ಪರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಪಕ್ಷವು ಕಳೆದ10 ವರ್ಷದಿಂದ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಧರ್ಮ, ದೇಶ ರಕ್ಷಣೆ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ದೇಶದ ಶ್ರೀಸಾಮಾನ್ಯ ಪರವಾದ ಆರ್ಥಿಕವಾಗಿ ಬೆಳವಣಿಗೆಗೆ ಯಾವುದೇ ಕಾರ್ಯಗಳನ್ನು ಮಾಡಿಲ್ಲ, ರೈತರು, ಹಿಂದುಳಿದ , ಪರವಾದ ಸರ್ಕಾರವಲ್ಲ. ಇದು ಶ್ರೀಮಂತರ ಸಾಲವನ್ನು ಮನ್ನಾ ಮಾಡುತ್ತಾರೆ. ಆದರೆ ದೇಶದ ರೈತರ ಸಾಲ ಮಾಡುವ ವಿಚಾರದಲ್ಲಿ ಮಾತ್ರ ಕಣ್ಣುಮುಚ್ಚಿಕೊಂಡು ಕುಳಿತ್ತಿದ್ದಾರೆ. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರದ ಮಾದರಿಯಲ್ಲಿ ದೇಶದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ1 ಲಕ್ಷ ರು.ಗಳನ್ನು ನೀಡುವುದು,ಯುವಕರಿಗೆ ಉದ್ಯೋಗ ತರಭೇತಿ 1 ಲಕ್ಷ ರು ಸಹಾಯಧನ , ಆಹಾರ ಮೇಲೆ ಜಿಎಸ್‌ಡಿ ಸ್ಥಗಿತ, ಬೆಳೆಗಳಿಗೆ ವಿಮೆ ಪಾಲಿಸಿ , ರೈತರ ಸಾಲ ಮನ್ನ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಮಾಡುವುದಾಗಿ ಘೋಷಣೆ ಮಾಡಿರುವುದು ಹೆಚ್ಚು ವರದಾನವಗಲಿದೆ ಎಂದು ತಿಳಿಸಿದರು.
ಕ್ಷೇತ್ರ ಮತದಾರು ಹೆಚ್ಚು ಅಂತರದಲ್ಲಿ ಗೆಲ್ಲಿಸಿದ ಪರಿಣಾಮ ಶಾಸಕ ಎ.ಆರ್.ಕೃಷ್ಣಮೂರ್ತಿ ಕಳೆದ ೧೦ ತಿಂಗಳಲ್ಲಿ ಕೊಳ್ಳೇಗಾಲ ಕ್ಷೇತ್ರಕ್ಕೆ ಸುಮಾರು ೧೫೦ ಕೋಟಿ ಅನುದಾನ ತಂದು ಕ್ಷೇತ್ರದ ಸಮುದಾಯ ಭವನ, ರಸ್ತೆ, ಚರಂಡಿ, ಕುಡಿಯುವ ನೀರು, ಸೇರಿದಂತೆ ಆದ್ಯತೆ ನೀಡಿದ್ದು, ಯಳಂದೂರು ಪಟ್ಟಣದಿಂದ ಬಿ.ಆರ್‌ಹಿಲ್ಸ್ ಚೆಕ್ ಪೋಸ್ಟ್ 16 ಕೋಟಿ, ಬಳೇಪೇಟೆಯಿಂದ ವೈ.ಕೆ.ಮೋಳೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ 6 ಕೋಟಿ, ಗುಂಬಳ್ಳಿಯಿಂದ ಯರಗಂಬಳ್ಳಿ ರಸ್ತೆಗೆ 75 ಲಕ್ಷ ರೂ. ವೆಚ್ಚದಲ್ಲಿ ಅನುದಾನವನ್ನು ನೀಡಿ ಕ್ರೀಯಾ ಯೋಜನೆ ತಯಾರಿಸಿ ಟೆಂಡರ್ ಪ್ರಕ್ರಿಯೆಯಲ್ಲಿ ಇದ್ದು, ಮುಂದಿನ ದಿನಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳಿಸುವ ಮೂಲಕ ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಜತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ರನ್ನು ಈ ಬಾರಿ ಗೆಲ್ಲಿಸುವ ಮೂಲಕ ಸಚಿವ ಕೈಯನ್ನು ಮತ್ತಷ್ಟು ಬಲಗೊಳಿಸಬೇಕೆಂದು ಕರೆ ನೀಡಿದರು.ಈ ವೇಳೆ ಜಿಪಂ ಮಾಜಿ ಸದಸ್ಯ ಜೆ.ಯೋಗೇಶ್, ಯಳಂದೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹೊಂಗನೂರು ಚಂದ್ರು, ಕಿನಕಹಳ್ಳಿ ಪ್ರಭುಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ಮಹೇಶ್ ಕುಮಾರ್, ಗುಂಬಳ್ಳಿ ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಕೃಷ್ಣಪುರ ದೇವರಾಜು, ಗುಂಬಳ್ಳಿ ರಾಜಣ್ಣ, ರೇವಣ್ಣ, ಪಸ್ಸಿ, ನಂಜಯ್ಯ, ಸಿದ್ದರಾಜು, ಮಲ್ಲು, ಪರಶಿವಮೂರ್ತಿ ಇತರರು ಹಾಜರಿದ್ದರು.