ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ

| Published : Mar 19 2025, 12:33 AM IST

ರಾಜ್ಯದ ಯುವಕರನ್ನು ಸಂಘಟಿಸಿ ಕಾಂಗ್ರೆಸ್ ಬಲ ಪಡಿಸಲಾಗುತ್ತದೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ರಾಜ್ಯದಲ್ಲಿ ಕಾಂಗ್ರೆಸ್ ಸಾಕಷ್ಟು ಬಲಿಷ್ಠವಾಗಿದೆ. ಇದನ್ನು ಮತ್ತಷ್ಟು ಬಲಿಷ್ಠ ಮಾಡಲು ಯುವ ಘಟಕ ಹಗಲಿರುಳು ಶ್ರಮಿಸಲಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಾಂಕ್‌ ಗೋಪಾಲಸ್ವಾಮಿ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಯುವಘಟಕದ ನೂತನ ಪದಾಧಿಕಾರಿಗಳ ಪದಗ್ರಹಕ್ಕೆ ತೆರಳುವ ಮೋದಲು ತಾಲೂಕಿನ ಹಿರೀಸಾವೆ ಹೋಬಳಿ ಕಿರೀಸಾವೆ ಗಡಿಆಂಜನೇಯ ದೇವಾಲಯದ ಮುಂಭಾಗದಲ್ಲಿ ಹಾಸನ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತಾಡಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಮೇಲೆ ಪಕ್ಷ ಸಂಘಟನೆ ಉತ್ತವಾಗಿದ್ದು ಅಧಿಕಾರಕ್ಕೆ ಬಂದಿದೆ ಎಂದರು. ಸಿದ್ದರಾಯಮ್ಮ ಮುಖ್ಯಮಂತ್ರಿ ಸ್ಥಾನ ವಹಿಸಿಕೊಂಡ ಮೇಲೆ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ನೀಡುವ ಮೂಲಕ, ಬಡವ, ಕೂಲಿ ಕಾರ್ಮಿಕರ ಹಾಗೂ ರೈತರಿಗೆ ಆಶಾಕಿರಣವಾಗಿದ್ದಾರೆ. ಇದರಿಂದ ವಿರೋಧ ಪಕ್ಷಗಳು ರಾಜ್ಯದಲ್ಲಿ ಇಲ್ಲದಂತೆ ಮಾಡಿದ ಕೀರ್ತಿ ಅವರದ್ದಾಗಿದೆ, ಇಂತಹ ವೇಳೆಯಲ್ಲಿ ಯುವಕರು ಪಕ್ಷ ಸಂಘಟನೆ ಮಾಡಲು ಯುವಘಟಕದ ಹೊಸ ಪದಾಧಿಕಾರಿಗಳು ಶ್ರಮಿಸಲಿದ್ದಾರೆ ಎಂದು ಹೇಳಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಒಂದು ಕುಟುಂಬಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಕಿತ್ತುಹಾಕುವಲ್ಲಿ ಕಳೆದ ಲೋಕಸಭೆ ಚುನಾವಣೆ ಯಶಸ್ವಿಯಾಗಿದೆ, ಯುವಸಮುದಾಯ ಮನಸ್ಸು ಮಾಡಿದ್ದರ ಫಲವಾಗಿ ದೇವೇಗೌಡರ ಕುಟುಂಬಕ್ಕೆ ತಕ್ಕ ಉತ್ತರ ನೀಡಲಾಗಿದೆ. ಮುಂದೆ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯುವಕರು ಕಣಕ್ಕೆ ಇಳಿದು ಕಾಂಗ್ರೆಸ್ ಬಾವುಟ ಜಿಲ್ಲಾ ಪಂಚಾಯಿತಿ ಕಟ್ಟಡ ಮೇಲೆ ಹಾರಿಸಲಾಗುವುದು ಎಂದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅವ್ವೇರಹಳ್ಳಿ ವೇಣು ಮಾತನಾಡಿ, ರಾಜ್ಯದಲ್ಲಿ ಮಂಜುನಾಥ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಯುವ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಅವುಗಳನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಕ್ಷೇತ್ರದ ಯುವಘಟಕದ ಪದಾಧಿಕಾರಿಗಳು ಮುಂದಾಗಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಯುವಕರಾಗಿದ್ದ ಶ್ರೇಯಸ್ ಎಂ ಪಟೇಲ್ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾದ ಮೇಲೆ ಹಾಸನ ಯುವಕರಲ್ಲಿ ಹೊಸ ಚೈತನ್ಯ ಮೂಡಿದೆ, ಅವರು ಜಿಲ್ಲೆಯ ಪ್ರತಿ ಗ್ರಾಮಗಳಿಗೆ ತೆರಳಿ ಯುವಕರನ್ನು ಪಕ್ಷದತ್ತ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಯುವಘಟಕ ಹಗಲಿರುಳು ಶ್ರಮಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಭರವಸೆ ನೀಡಿದರು.

ತಾಲೂಕಿನ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳ ಪದಗ್ರಹಣ ಮಾಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮಾರ್ಗದರ್ಶನ ನೀಡಲಾಗುವುದು, ಪ್ರತಿ ಗ್ರಾಮದಲ್ಲಿ ಕಾಂಗ್ರೆಸ ಬಾವುಟ ಹಾರಿಸುವುದು ನಮ್ಮ ಮುಂದಿನ ಗುರಿಯಾಗಿದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಯವಘಟಕಕ್ಕೆ ಸಾಕಷ್ಟು ಮಾರ್ಗದರ್ಶನ ನೀಡುತ್ತಿದ್ದು ಗಟ್ಟಿಯಾಗಿ ಪಕ್ಷ ನೆಲೆ ನಿಲ್ಲುವಂತೆ ಮಾಡುತ್ತಿದ್ದಾರೆ. ಇದೇ ಹಾದಿಯಲ್ಲಿ ಯುವಘಟಕದ ಪದಾಧಿಕಾರಿಗಳು ಸಾಗಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಯುವಕರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಯುವಘಟಕದ ಪದಾಧಿಕಾರಿಗಳ ಪದಗ್ರಹಣಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಯುವಘಟಕದ ಪ್ರಧಾನ ಕಾರ್ಯದರ್ಶಿ ಶಶಾಂಕ್‌ ಗೋಪಾಲಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದರು.

ಕಾಂಗ್ರೆಸ್ ಯುವಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಕಾಂಗ್ರೆಸ್ ಯುವಘಟಕದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಯೀಮ್, ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಧರ್ಮ, ಅಲೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್, ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ದಿಲೀಪ್, ಹಾಸನ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇರ್ಫಾನ್, ಬೇಲೂಕು ಬ್ಲಾಕ್ ಅಧ್ಯಕ್ಷ ಆನಂದ್, ಹೊಳೆನರಸೀಪುರ ಬ್ಲಾಕ್ ಉಪಾಧ್ಯಕ್ಷ ಪುರುಷೋತ್ತಮ್, ಹಿರೀಸಾವೆ ಬ್ಲಾಕ್ ಅಧ್ಯಕ್ಷ ರಾಕೇಶ್, ಚನ್ನರಾಯಪಟ್ಟಣ ಬ್ಲಾಕ್ ಅಧ್ಯಕ್ಷ ಸಚಿನ್‌ ಗೌಡ, ಮುಖಂಡರಾದ ವೆಂಕಟೇಶ್, ಪ್ರಸಾದ್, ಮೋಹನ್ ಮೊದಲಾದವರು ಉಪಸ್ಥಿತರಿದ್ದರು.