ಸಾರಾಂಶ
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು 40 ವರ್ಷ, ಜಿ. ಪರಮೇಶ್ವರ್ 20 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಆಗಿಲ್ಲ. ಕಾಂಗ್ರೆಸ್ಸಿಗೆ ದಲಿತರನ್ನು ಸಿಎಂ ಮಾಡುವ ಉದ್ದೇಶವೂ ಇಲ್ಲ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಈ ವರೆಗಿನ ಆಡಳಿತದಲ್ಲಿ ಮಾಡದೆ ದಲಿತರಿಗೆ ಮೋಸ ಮಾಡುತ್ತಲೇ ಹೋಗುತ್ತಿದ್ದಾರೆ.
ಹುಬ್ಬಳ್ಳಿ:
ಕಾಂಗ್ರೆಸ್ ಯಾವುದೇ ಕಾರಣಕ್ಕೂ ದಲಿತರನ್ನು ಮುಖ್ಯಮಂತ್ರಿ ಮಾಡಲ್ಲ. ಅವರೇನಿದ್ದರೂ ಮತ ಬ್ಯಾಂಕ್ ಆಗಿ ಉಪಯೋಗ ಆಗುತ್ತಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸತೀಶ ಜಾರಕಿಹೊಳಿ ಸಿಎಂ ಮಾಡುವುದಿಲ್ಲ. ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಒಳಜಗಳ ಹಚ್ಚುವುದು. ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು 40 ವರ್ಷ, ಜಿ. ಪರಮೇಶ್ವರ್ 20 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಆದರೂ ಆಗಿಲ್ಲ. ಕಾಂಗ್ರೆಸ್ಸಿಗೆ ದಲಿತರನ್ನು ಸಿಎಂ ಮಾಡುವ ಉದ್ದೇಶವೂ ಇಲ್ಲ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಈ ವರೆಗಿನ ಆಡಳಿತದಲ್ಲಿ ಮಾಡದೆ ದಲಿತರಿಗೆ ಮೋಸ ಮಾಡುತ್ತಲೇ ಹೋಗುತ್ತಿದ್ದಾರೆ ಎಂದು ಕಿಡಿಕಾರಿದರು.
35 ವರ್ಷಗಳಿಂದ ಎಸ್‌ಸಿ ಜನಾಂಗಕ್ಕೆ ಒಳ ಮೀಸಲಾತಿ ನೀಡಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರ, ಹೈಕಮಾಂಡ್ 2023ರಲ್ಲಿ ಒಳ ಮೀಸಲಾತಿ ಜಾರಿ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದರು. ಪ್ರಧಾನಿ ನರೇಂದ್ರ ಮೋದಿ ಅವರು ಒಳ ಮೀಸಲಾತಿಗೆ ನಾವು ಬದ್ಧರಿದ್ದೇವೆ ಎಂದು ಹೇಳಿದರು. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶಿಸಿತು. ಆದರೆ, ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಅನುಷ್ಠಾನ ತರಲು ಸಿದ್ಧವಿಲ್ಲ. ಕಣ್ಣೊರೆಸುವುದು, ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))