ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ

| Published : May 09 2024, 01:08 AM IST / Updated: May 09 2024, 10:35 AM IST

ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ನಾವು ಕಾಂಗ್ರೆಸ್‌ನವರು ಸಂಘಟಿತರಾಗಿ ಪ್ರಚಾರ ನಡೆಸಿದೆವು. ಅದಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣದಲ್ಲಿರಿಸಿದ್ದೇವೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದರು.

ಹಳಿಯಾಳ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಒಂದೇ ಸ್ಥಾನ ಗೆದ್ದಿದ್ದೆವು, ಆದರೆ ಈಗ ರಾಜ್ಯದಲ್ಲಿ ನಮ್ಮ ಆಡಳಿತ ಇದೆ. ನಮ್ಮ ಪರವಾಗಿ ಮತದಾರರ ಒಲವು ಇದೆ. ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 17ರಿಂದ 22 ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ನಾವು ಕಾಂಗ್ರೆಸ್‌ನವರು ಸಂಘಟಿತರಾಗಿ ಪ್ರಚಾರ ನಡೆಸಿದೆವು. ಅದಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣದಲ್ಲಿರಿಸಿದ್ದೇವೆ. ಅದಲ್ಲದೇ ಮುಖ್ಯವಾಗಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಐದು ಗ್ಯಾರಂಟಿಗಳು ಇಲ್ಲಿ ಕೆಲಸ ಮಾಡುತ್ತಿವೆ ಎಂದರು.

 ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಘೋಷಿಸಿದ ಐದು ಗ್ಯಾರಂಟಿಗಳನ್ನು ಆಡಳಿತಕ್ಕೆ ಬಂದ ತಕ್ಷಣ ಜಾರಿಗೊಳಿಸಿದ್ದೇವೆ. ಅದರ ಒಳ್ಳೆಯ ಪರಿಣಾಮ ಮಹಿಳಾ ಮತದಾರರ ಮೇಲೆ ಆಗಿದೆ. ನಮ್ಮ ಚುನಾವಣೆ ಸಭೆಯಲ್ಲಿ ಮಹಿಳೆಯರ ಸಂಖ್ಯೆ ಅತಿ ಹೆಚ್ಚಿರುತ್ತಿದ್ದನ್ನು ನಾನು ಗಮನಿಸಿದ್ದೇನೆ. ಹಾಗಾಗಿ ಈ ಬಾರಿ ಅತಿ ಹೆಚ್ಚು ಸ್ಥಾನವನ್ನು ನಾವು ರಾಜ್ಯದಲ್ಲಿ ಗೆಲ್ಲಲಿದ್ದೇವೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಅಂಜಲಿ ನಿಂಬಾಳ್ಕರ್ ಗೆಲುವು ಖಚಿತ ಎಂದರು.