ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ

| Published : May 16 2024, 12:46 AM IST

ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆ ಪಡೆದಿದೆ. ಸರ್ಕಾರ ನೀಡಿರುವ ಐದು ಗ್ಯಾರೆಂಟಿಗಳು ಪಕ್ಷದ ಕೈಹಿಡಿಯಲಿವೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ ಎಂದು ಹಾರೈಸಿದರು.

ಈ ವೇಳೆ ಕೆಪಿಸಿಸಿ ಸದಸ್ಯ ಕೆ.ಕುಬೇರ್ ಕಿಸಾನ್, ಗ್ರಾಪಂ ಅಧ್ಯಕ್ಷ ಪ್ರಕಾಶ್, ಪುರಸಭ ಸದಸ್ಯ ಉಮಾಶಂಕರ್, ಮುಖಂಡರಾದ ಕೃಷ್ಣೇಗೌಡ, ಪಟೇಲ್‌ಭರತ್, ಮಹಮದ್ ಅನಿಪ್(ಪಾಪು), ಚಂದ್ರಶೇಖರ್, ಧನಂಜಯ, ಚಿಕ್ಕಣ್ಣ, ಸೇರಿದಂತೆ ಹಲವರು ಮುಖಂಡರು ಇದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮ ದಿನ ಆಚರಣೆ

ಮಂಡ್ಯ:

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಆಚರಿಸಿದರು.

ನಗರದ ಮಿಮ್ಸ್ ಆವರಣದ ಮಮತೆಯ ಮಡಿಲುವಿನ ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ಡಿಕೆಶಿ ಅಭಿಮಾನಿಗಳ ಬಳಗದ ವತಿಯಿಂದ ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಅವರ ಸಂಬಂಧಿಕರಿಗೆ ಬೆಳಗಿನ ಉಪಾಹಾರ ಹಾಗೂ ಗಂಜಿ ವಿತರಿಸುವ ಕಾರ್ಯಕ್ರಮ ನಡೆಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ. ಆಯಸ್ಸು, ಆರೋಗ್ಯ ಭಾಗ್ಯವನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದರು.

ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆಯುಸ್ಸು, ಆರೋಗ್ಯ ವೃದ್ಧಿಯಾಗಿ, ರಾಜಕೀಯ ಜೀವನ ನೆಮ್ಮದಿಯಾಗಿರಲಿ ಎಂದು ಪ್ರಾರ್ಥಿಸಿ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು. ನಂತರ ಸ್ವರ್ಣಸಂದ್ರದ ಪ್ರೇರಣ ಅಂಧರ ಶಾಲೆ ಮಕ್ಕಳಿಗೆ ಸಹಿ, ಊಟ ವಿತರಿಸಲಾಯಿತು.

ಈ ವೇಳೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕಾರ್ತಿಕ್, ನಗರಸಭೆ ಸದಸ್ಯ ಟಿ.ಕೆ.ರಾಮಲಿಂಗಯ್ಯ, ಯುವ ಮುಖಂಡರಾದ ಲಕ್ಷ್ಮಿಕಾಂತ್, ಶ್ರೀಕಾಂತ್, ಮಧುಸೂದನ್, ಶ್ರೀನಿವಾಸ್, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದ ಮಂಗಲ ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.