ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೇ ಗೆಲುವು: ಆಯನೂರು ಮಂಜುನಾಥ

| Published : Jan 19 2024, 01:49 AM IST

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೇ ಗೆಲುವು: ಆಯನೂರು ಮಂಜುನಾಥ
Share this Article
  • FB
  • TW
  • Linkdin
  • Email

ಸಾರಾಂಶ

ಸುಮಾರು 42 ವರ್ಷಗಳ ಇತಿಹಾಸದಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬಂದಿಲ್ಲ. ಆದರೇ ಈ ಬಾರಿ ತಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ತೋರಿಸುತ್ತೇನೆ. ನೈರುತ್ಯ ಪದವೀಧರ ಕ್ಷೇತ್ರ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ಹಾಗೂ ಮಾಯಕೊಂಡ ಕ್ಷೇತ್ರದ ಒಂದು ಹೋಬಳಿ ಸೇರಿದೆ.

ಚುನಾವಣೆ ಹಿನ್ನೆಲೆ ಪದವೀಧರ ಮತದಾರರ ಭೇಟಿ, ಮಾತುಕತೆ

ಕನ್ನಡಪ್ರಭ ವಾರ್ತೆ ಹೊನ್ನಾಳಿ

1982ರಿಂದಲೂ ವಿವಿಧ ವರ್ಗಗಳ ಕಾರ್ಮಿಕರ, ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳ ನಡೆಸಿದ್ದರಿಂದ ಎಲ್ಲಾ ವರ್ಗದವರೂ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು.

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಅವಳಿ ತಾಲೂಕಿನ ಮತದಾರರ ಭೇಟಿಯಾಗಿ ಬಳಿಕ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 42 ವರ್ಷಗಳ ಇತಿಹಾಸದಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬಂದಿಲ್ಲ. ಆದರೇ ಈ ಬಾರಿ ತಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ತೋರಿಸುತ್ತೇನೆ. ನೈರುತ್ಯ ಪದವೀಧರ ಕ್ಷೇತ್ರ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ಹಾಗೂ ಮಾಯಕೊಂಡ ಕ್ಷೇತ್ರದ ಒಂದು ಹೋಬಳಿ ಸೇರಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಪಿಎಸ್ ಯೋಜನೆಗೆ ಒಳಪಡಿಸಬೇಕೆಂಬ ನೌಕರರ ಬೇಡಿಕೆ ತೀವ್ರವಾಗಿದ್ದು, ಈಗಿನ ಕಾಂಗ್ರೆಸ್ ಸರ್ಕಾರ ಒಪಿಎಸ್‌ ಯೋಜನೆ ಮತ್ತೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಿದ್ದು, ಮುಂಬರುವ ಬಜೆಟ್ ನಲ್ಲಿ ಒಪಿಎಸ್ ಜಾರಿ ಘೋಷಣೆ ಮಾಡಿ ಹಣ ಮೀಸಲಿರಿಸಬೇಕು ಎಂದು ಮುಖ್ಯಮಂತ್ರಿ ಹಾಗೂ

ಉಪ ಮುಖ್ಯಮಂತ್ರಿಯವರಿಗೆ ಒತ್ತಾಯಿಸುತ್ತೇನೆ. ಜೊತೆಗೆ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಹಿರಿಯ ರಾಜಕಾರಣಿ, ರಾಜ್ಯದ ಮುಖ್ಯಮಂತ್ರಿ, ಯಾರೇ ಆಗಲಿ ಅವರ ಸ್ಥಾನಕ್ಕೆ ಬೆಲೆ ಕೊಡಬೇಕು ಅದರೆ ಸಂಸದ ಅನಂತ್ ಕುಮಾರ್ ಹೆಗಡೆ ಬಳಸಿರುವ ಮಾತುಗಳು ಸರಿಯಲ್ಲ ಅವರು ಮಾತಿನ ಮೇಲೆ ಹಿಡಿತವಿಟ್ಟುಕೊಳ್ಳಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ತಾಲೂಕು ಅಧ್ಯಕ್ಷ ಡಾ.ಈಶ್ವರನಾಯ್ಕ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಎಚ್.ಎ.ಉಮಾಪತಿ, ಮುಖಂಡ ಎಚ್.ಎ.ಗದ್ದಿಗೇಶ್, ಬೇಲಿಮಲ್ಲೂರು ನರಸಪ್ಪ, ಸಣ್ಣಕ್ಕಿ ಬಸವನಗೌಡ, ಸಾಸ್ವೇಹಳ್ಳಿ ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ನಾಗೇಂದ್ರ, ತಾಲೂಕು ಮಹಿಳಾ ಅಧ್ಯಕ್ಷೆ ಪುಷ್ಪಾ ರವೀಶ್, ಯವ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಆಶಾ, ಸೂರಟೂರು ಗ್ರಾ.ಪಂ. ಸದಸ್ಯೆ ಸುಮಾ, ಜಿಲ್ಲಾ ಯುವ ಕಾಂಗ್ರೆಸ್ ನ ಎಚ್.ಎಸ್. ರಂಜಿತ್, ವೀರಣ್ಣ ಮುಂತಾದವರಿದ್ದರು.

7ನೇ ವೇತನ ಆಯೋಗದ ವರದಿ ಇನ್ನೂ ಕೂಡ ಸರ್ಕಾರಕ್ಕೆ ನೀಡಿಲ್ಲ. ಪ್ರಸ್ತುತ ಶೇ.17ರಷ್ಟು ಮಧ್ಯಂತರ ಪರಿಹಾರ ನೀಡುತ್ತಿದೆ. ಕೂಡಲೇ ಮಧ್ಯಂತರ ಪರಿಹಾರ ನಿಲ್ಲಿಸಿ ಸರ್ಕಾರ ವರದಿ ತರಿಸಿಕೊಂಡು ರಾಜ್ಯದ ಲಕ್ಷಾಂತರ ನೌಕರರಿಗೆ ಅನೂಕೂಲವಾಗುವ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಪಡಿಸುತ್ತೇನೆ. ಆಯನೂರು ಮಂಜುನಾಥ, ವಿಧಾನ ಪರಿಷತ್ ಮಾಜಿ ಸದಸ್ಯ