ಸಾರಾಂಶ
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ.
ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು
ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.ಇಲ್ಲಿನ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಿದ ಕಾರ್ಯಕರ್ತರು ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನತೆ ನೀಡಿರುವ ಸಂದೇಶ ಎಂದು ಪಕ್ಷದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಜೈಕಾರಗಳನ್ನು ಕೂಗಿ ಸಂಭ್ರಮಿಸಿ ಸಿಹಿ ಹಂಚಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಎಸ್ ಖಾದರ್, ಮುಖಂಡರಾದ ಬಡೋ ಬಯ್ಯ, ಎರೆಜ್ಜನಹಳ್ಳಿ ನಾಗರಾಜ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ರಫಿ, ಮುಖಂಡರಾದ ಗೋಪಾಲ್, ಶಿವಲಿಂಗಪ್ಪ, ಕೇಶವ ಇದ್ದರು.