ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

| Published : May 23 2025, 12:09 AM IST

ಸಾರಾಂಶ

ರಾಮನಗರ: ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ರಾಮನಗರ: ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ನಗರದ ಐಜೂರು ವೃತ್ತದಲ್ಲಿ ಸೇರಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆಗಳನ್ನು ಮೊಳಗಿಸಿದರು.

ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಹೆಗಲ ಮೇಲೆ ಹೊತ್ತು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.

ವೃತ್ತದಲ್ಲಿ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ಪಟಾಕಿ ಸಿಡಿಸಿದರು. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಇದರಿಂದಾಗಿ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ಮಾಜಿ ಶಾಸಕ ಕೆ.ರಾಜು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್,

ರಾಮನಗರ ನಗರಾಭಿವೃದ್ದಿ ಪ್ರಾಧಿಕಾರ ಸದಸ್ಯ ಪರ್ವೇಜ್ ಪಾಷ, ನಗರಸಭೆ ಉಪಾಧ್ಯಕ್ಷೆ ಆಯಿಷಾ ಬಾನು, ಸದಸ್ಯರಾದ ಸಮದ್ , ನಾಗಮ್ಮ, ವಿಜಯ ಕುಮಾರಿ, ಮುಖಂಡರಾದ ಸಿಎನ್ ಆರ್ ವೆಂಕಟೇಶ್ , ಗುರುಪ್ರಸಾದ್ , ಬಷೀರ್ ಮತ್ತಿತರರು ಭಾಗವಹಿಸಿದ್ದರು.

22ಕೆಆರ್ ಎಂಎನ್ 6,7.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿದರು.