ಸಾರಾಂಶ
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಮಂಗಳವಾರ ಭೇಟಿ ನೀಡಿದ ವಿರಾಜಪೇಟೆ ಕ್ಷೇತ್ರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಬಾಳೆಲೆ ವಲಯ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋದಂಡ ಸೋಮಣ್ಣ ಆವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕರ್ತರು ಶಾಸಕರೊಂದಿಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ತಮ್ಮ ಅಹವಾಲುಗಳನ್ನು ನೀಡಿದರು. ಎಲ್ಲವನ್ನು ಆಲಿಸಿದ ಶಾಸಕರು, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಯಾವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಚೋಂದಮ್ಮ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ಸರ್ಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.