ಸಾರಾಂಶ
ನಗರದ ಲಾವಣ್ಯ ಫಂಕ್ಷನ್ ಹಾಲ್ ನಲಲ್ಲಿ ಮಾರ್ಚ 25ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಬೀದರ್: ನಗರದ ಲಾವಣ್ಯ ಫಂಕ್ಷನ್ ಹಾಲ್ ನಲಲ್ಲಿ ಮಾರ್ಚ 25ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.
ಕಲ್ಯಾಣ ಕರ್ನಾಟಕದ ಉಸ್ತುವಾರಿಯೂ ಆದ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಾಲಯಪ್ಪನ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್ ನೇತೃತ್ವ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಸಾಗರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಮಾಜಿ ಶಾಸಕ ಅಶೋಕ್ ಖೇಣಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಮುಖಂಡ ಭೀಮಸೇನರಾವ್ ಸಿಂಧೆ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರದಾರ್ ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿ, ಜಿಲ್ಲಾ ಘಟಕ, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ ಹಾಗೂ ದತ್ತಾತ್ರಿ ಮೂಲಗೆ ಮನವಿ ಮಾಡಿದ್ದಾರೆ.
--