ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

| Published : Aug 18 2024, 01:46 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸ್ತಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಬಾಣಾವರದ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 206 ಅನ್ನು ತಡೆದು, ಟೈಯರ್‌ಗೆ ಬೆಂಕಿ ಹಚ್ಚುವುದರ ಮೂಲಕ ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಈ ಸಂದರ್ಭದಲ್ಲಿ ಮಾತನಾಡಿದ ಬಗರ್‌ ಹುಕುಂ ಕಮಿಟಿಯ ನಿರ್ದೇಶಕ ಬಿಎಂ ಜಯಣ್ಣ, ಕಾನೂನು ನಿಯಮಾವಳಿಗಳನ್ನು ಗಾಳಿಗೆ ತೂರಿ ಏಕಪಕ್ಷೀಯವಾಗಿ ತೀರ್ಮಾನವನ್ನು ಕೈಗೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ಖಂಡನೀಯವಾಗಿದೆ. ಈ ಮೂಲಕ ರಾಜ್ಯಪಾಲರು ಕಾನೂನಿಗೆ ಅಗೌರವ ಸೂಚಿಸಿರುವುದಲ್ಲದೆ ಕೇಂದ್ರ ಸರ್ಕಾರದ ಅಣತಿಯಂತೆ ನಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾ.ಪಂ ಸದಸ್ಯರಾದ ರವಿಶಂಕರ್, ಲಿಂಗರಾಜು, ಗ್ರಾಪಂ ಸದಸ್ಯರಾದ ಬಿ ಆರ್ ಶ್ರೀಧರ್, ರಾಜು, ಸೈಯದ್ ಆಸಿಫ್, ಭಾಗ್ಯಮ್ಮ, ಕಾಂಗ್ರೆಸ್ ಮುಖಂಡರಾದ ಇಮ್ರಾನ್ , ಟಿಎಲ್ ಪ್ರಕಾಶ್ , ಆದಿಲ್ ಮನ್ಸೂರ್, ಸಂಗೊಳ್ಳಿ ರಾಯಣ್ಣ ಸಂಘದ ಅಧ್ಯಕ್ಷ ಭಾಸ್ಕರ್, ಶ್ರೀಧರ್, ಚೇತನ್, ಆಟೋ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಿ , ಮುಸ್ಲಿಂ ಸಮಾಜದ ಅಧ್ಯಕ್ಷ ರಹಿಮ್ ಸಾಬ್, ಆರಿಸ್ ಜಾನ್, ಮುಸ್ಲಿಂ ಮುಖಂಡ ಇಲಿಯಾಜ್, ಕರವೇ ಗೌರವಾಧ್ಯಕ್ಷ ಬಿ ಆರ್ ಲಕ್ಷ್ಮೀಶ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.