ಸಂಜಯ ವಿರುದ್ಧ ಕೈ ಕಾರ್ಯಕರ್ತೆಯರ ಪ್ರತಿಭಟನೆ

| Published : Aug 24 2024, 01:25 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತೆಯರು ಸಂಜಯ ಪಾಟೀಲ ಭಾವಚಿತ್ರಕ್ಕೆ ಸಗಣಿ ಬಳಿದು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೆ ನಾಲಿಗೆ ಹರಿಬಿಡುತ್ತಿರುವ ಸಂಜಯ ಪಾಟೀಲ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನಾರ್ಹ. ಗೌರಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿರುವ ನಿಮಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನತೆಗೆ ನಿಮಗೆ ಸಗಣಿ ತಿನ್ನಿಸಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು. ನಿಮ್ಮ ದಾದಾಗಿರಿ ನಡೆಯುವುದಿಲ್ಲ ಎಂದು ಘೋಷಣೆ ಕೂಗಿದರು. ಆಯಿಷಾ ಸನದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.