ಸಾರಾಂಶ
ಫೋಟೋ- 7ಎಂವೈಎಸ್ 55
------------ಕನ್ನಡಪ್ರಭ ವಾರ್ತೆ ನಂಜನಗೂಡು
ಮತಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಜನಜಾಗೃತಿ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ನಡೆಸುವ ಮೂಲಕ ಬಿಜೆಪಿ ವಿರುದ್ಧ ಪ್ರತಿಭಟಿಸಿದರು.ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕಾಂಗ್ರೆಸ್ ಕೈಗೊಂಡಿರುವ ಈ ಹೋರಾಟಾತ್ಮಕ ಅಭಿಯಾನವು ಜನರ ಮತದ ಹಕ್ಕಿನ ರಕ್ಷಣೆಗೆ ಮತ್ತು ಪ್ರಜಾಸತ್ತಾತ್ಮಕ ಭಾರತದ ಉಳಿವಿಗೆ ಬದ್ಧವಾಗಿದೆ, ಆದ್ದರಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ಮತದಾರರು ತಮ್ಮ ಸಹಿ ಸಂಗ್ರಹದ ಮೂಲಕ ರಾಹುಲ್ ಗಾಂಧಿಯವರ ಜನಜಾಗೃತಿ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂದರು.ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ ಶಂಕರ್, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀಕಂಠ ನಾಯಕ, ನಗರಸಭಾ ಅಧ್ಯಕ್ಷರಾದ ಶ್ರೀಕಂಠಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಮಾರುತಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಕಾಂಗ್ರೆಸ್ ಎಸ್ಸಿ ವಿಭಾಗ ರಾಜ್ಯ ಸಂಚಾಲಕ ರವಿಪ್ರಕಾಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಣ್ಣ, ಮುಖಂಡರಾದ ದೊರೆಸ್ವಾಮಿ ನಾಯಕ, ನಾಗರಾಜು, ವಿಜಯ್ ಕುಮಾರ್, ಶ್ರೀನಿವಾಸ ಮೂರ್ತಿ, ಎನ್.ಟಿ. ಗಿರೀಶ್, ರಾಜೇಶ್, ಚಂದ್ರು, ನಗರಸಭಾ ಸದಸ್ಯರಾದ ಗಂಗಾಧರ್, ಪ್ರದೀಪ್, ಎಸ್.ಪಿ. ಮಹೇಶ್, ಗಾಯತ್ರಿ, ಪುರಸಭಾ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಜಿಪಂ ಮಾಜಿ ಸದಸ್ಯರಾದ ಲತಾಸಿದ್ದಶೆಟ್ಟಿ, ಶಶಿರೇಖಾ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))