ಸಾರಾಂಶ
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸರ್ಕಾರದ ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡುವ ವಿಪಕ್ಷಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಇಲಾಖೆ ಅನುದಾನದ ಬಗ್ಗೆ ಮಾಹಿತಿ ಪಡೆದು ತಕ್ಕ ಉತ್ತರ ನೀಡಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೂಚನೆ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿ, ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಪಕ್ಷದ ಕಾರ್ಯಕರ್ತರು ಮೌನವಹಿಸುವುದನ್ನು ಬಿಟ್ಟು ಅಭಿವೃದ್ಧಿ ಚರ್ಚೆಗೆ ಇಳಿಯಬೇಕೆಂದು ಕರೆ ನೀಡಿದರು.
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು. ಸಹಕಾರ ಸಂಘಗಳ ಚುನಾವಣೆಯಲ್ಲೂ ಸಕ್ರಿಯವಾಗಬೇಕು ಎಂದರು.ಪ್ರತಿ ಹೋಬಳಿಗಳಲ್ಲಿ ಮುಖಂಡರ ತಂಡ ರಚನೆ ಮಾಡಿಕೊಂಡು ಪಕ್ಷ ಸಂಘಟನೆ ಮಾಡಬೇಕು. ಆಂತರಿಕ ಭಿನ್ನಾಭಿಪ್ರಾಯ ಬದ್ದಿಗೊತ್ತಿ ಕೆಲಸ ಮಾಡಬೇಕು. ಸದ್ಯದಲ್ಲಿಯೇ ಕಾರ್ಯಕರ್ತರ ಸಭೆ ಕರೆದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗುವುದು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಚುರುಕಿನಿಂದ ಕೆಲಸ ಮಾಡಬೇಕು. ವಾರ್ಡ್ ವಾರು ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಪಕ್ಷವನ್ನು ಸಂಘಟಿಸಬೇಕೆಂದು ತಿಳಿಸಿದರು.
ಈ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ. ಸಿ.ಪಿ.ರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ್ ಸೇರಿದಂತೆ ಇತರರು ಇದ್ದರು.