ಸಿರುಗುಪ್ಪ: ಮತದಾರರ ಹಕ್ಕುಗಳ ರಕ್ಷಣೆಗೆ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಿ ಕೆಲಸ ಮಾಡಬೇಕು ಎಂದು ಲೋಕಸಭಾ ಸದಸ್ಯ ಈ.ತುಕಾರಾಂ ಹೇಳಿದರು.
ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ತಾಲೂಕು ಕಾಂಗ್ರೆಸ್ ಸಮಿತಿಯಿಂದ ಎಸ್.ಐ.ಆರ್. ಜನಜಾಗೃತಿ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಬಿ.ಎಲ್.ಎ-2 ಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದರು.ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಪ್ರತಿ ಕಾರ್ಯಕರ್ತನ ಜವಾಬ್ದಾರಿಯಾಗಿದೆ. ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಮತದಾರರಿಗೆ ಅಗತ್ಯ ಮಾಹಿತಿ ನೀಡಿ, ಅವರ ಹಕ್ಕುಗಳನ್ನು ರಕ್ಷಿಸುವ ಕೆಲಸವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು.ಬೆಂಗಳೂರು ವಿಧಾನ ಪರಿಷತ್ ಸದಸ್ಯ ಎಚ್.ಪಿ.ಸುಧಾಮ್ ದಾಸ್ ಮಾತನಾಡಿ, ಪ್ರಜಾಪ್ರಭುತ್ವದ ಶಕ್ತಿಯೇ ಮತದಾರರು. ಗಂಭೀರವಾಗಿ ಪರಿಗಣಿಸಿ ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿ ಅರ್ಹ ನಾಗರಿಕರ ಹೆಸರನ್ನು ಮತದಾರರು ಪಟ್ಟಿಯಲ್ಲಿ ಖಚಿತ ಪಡಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯ ನಿರ್ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಮಾಜಿ ಶಾಸಕ ಟಿ.ಎಂ. ಚಂದ್ರಯ್ಯ ಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಗ್ರಾಮೀಣ ಭಾಗದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಯೋಗಿ ಮಾತನಾಡಿದರು.ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕರಿಬಸಪ್ಪ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಮಾರುತಿ ರೆಡ್ಡಿ, ವರಪ್ರಸಾದ್, ಮಲ್ಲಿಕಾರ್ಜುನ ಬಾಲಪ್ಪ, ಸಿದ್ದರಾಮಯ್ಯ ಸ್ವಾಮಿ, ದಮ್ಮೂರು ಸೋಮಪ್ಪ, ನರೇಂದ್ರ ಸಿಂಹ, ಕಾಯಿಪಲ್ಲೆ ನಾಗರಾಜ, ಚಿಟಿಗಿ ಹುಸೇನಿ, ಕೊಡ್ಲೆ ಮಲ್ಲಿಕಾರ್ಜುನ, ಕೋಟಿರೆಡ್ಡಿ, ದೇವರಮನೆ ನಾಗಪ್ಪ ಇದ್ದರು.
ಸಿರುಗುಪ್ಪ ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ನಡೆದ ಎಸ್.ಐ.ಆರ್. ಜನಜಾಗೃತಿ ಮತ್ತು ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.