ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ

| Published : Sep 21 2024, 01:48 AM IST

ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಣಿಗಲ್ : ಕಾಂಗ್ರೆಸಿಗರು ಶಾಸಕ ಮುನಿರತ್ನ ಸ್ಥಾನವನ್ನು ವಜಾ ಮಾಡಬೇಕೆಂದು ಒತ್ತಾಯಿಸಿ ಹಾಗೂ ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ತಹಸೀಲ್ದಾರ್‌ಗೆ ಸಲ್ಲಿಸಿದರು.

ಕುಣಿಗಲ್ : ಕಾಂಗ್ರೆಸಿಗರು ಶಾಸಕ ಮುನಿರತ್ನ ಸ್ಥಾನವನ್ನು ವಜಾ ಮಾಡಬೇಕೆಂದು ಒತ್ತಾಯಿಸಿ ಹಾಗೂ ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ತಹಸೀಲ್ದಾರ್‌ಗೆ ಸಲ್ಲಿಸಿದರು.ಪಟ್ಟಣದ ತಹಸಿಲ್ದಾರ್ ಕಚೇರಿ ಆಭರಣದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಹಲವಾರು ಘೋಷಣೆಗಳನ್ನು ಕೂಗಿದರು. ಶಾಸಕ ಮುನಿರತ್ನ ಪರಿಶಿಷ್ಟ ಜಾತಿ ಹಾಗೂ ಒಕ್ಕಲಿಗ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿ ಸಮಾಜದ ನೆಮ್ಮದಿ ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಜನಪ್ರತಿನಿಧಿಗಳು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡಲು ಯೋಗ್ಯರಲ್ಲ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕಾಗಿ ಆಗ್ರಹಿಸಿದ್ದಾರೆ.

ಹತ್ಯಾಚಾರ ಪ್ರಕರಣ ಮತ್ತು ರಾಜಕೀಯ ಮುಖಂಡರುಗಳಿಗೆ ಎರಡು ಚುಚ್ಚುಮದ್ದು ನೀಡಿ ಸಾಯಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂತಹ ಪ್ರಕರಣಗಳಲ್ಲಿ ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗನಗೌಡ ಪಾಪಣ್ಣ ಶಂಕರ್, ಜೆಸಿಪಿ ರಾಜಣ್ಣ ಸೇರಿದಂತೆ ಹಲವರು ಕಾಂಗ್ರೆಸ್ಸಿಗರು ಇದ್ದರು.