ಸಾರಾಂಶ
ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಹಿರೇಕೆರೂರು: ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚಿಕ್ಕೊಣತಿ ಗ್ರಾಮದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಮತಯಾಚನೆ ಮಾಡಿ ಮಾತನಾಡಿದರು.ಸದ್ಯ ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ಚುನಾವಣಾ ಪೂರ್ವ ನೀಡಿದ್ದ ಪ್ರಣಾಳಿಕೆಯ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರ ಪಾಲಿಗೆ ಆಶಾಕಿರಣವಾಗಿದೆ. ಕೇಂದ್ರದಲ್ಲಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸಲಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಡಿವಾಳರ, ಸಿದ್ದಪ್ಪ ಹಂಪಣ್ಣನವರ, ಶಿವರಾಜ ಹರಿಜನ, ಷಣ್ಮುಖಯ್ಯ ಮಳಿಮಠ, ಮಲ್ಲಿಕಾರ್ಜುನ ಬುರಡಿಕಟ್ಟಿ, ದತ್ತಾತ್ರೇಯ ರಾಯ್ಕರ್, ಕನ್ನಪ್ಪ ಮಾಳಕ್ಕನವರ, ಗಿರೀಶ ಬಣಕಾರ, ರಾಜು ಪತ್ರಿಮರದ, ಶೌಕತ್ ಯಲ್ಲಾಪುರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿದ್ದರು.