ಸಾರಾಂಶ
ಸಂಪರ್ಕ ರಸ್ತೆಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಜೊತೆಗೆ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಪೂರಕ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಆದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಚುನಾಯಿತನಾದ ಬಳಿಕ ನನ್ನ ಅಂತ ಕರಣ ಒಪ್ಪುವಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಸಂಪರ್ಕ ರಸ್ತೆಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಜೊತೆಗೆ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಪೂರಕ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಆದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಿಂದ ಶಿವಪುರ ಸಣ್ಣೇನಳ್ಳಿ ಹಾಗೂ ಬೆಳಗುಂಬ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ದಾರಿ 206 ಟಿ.ಎಚ್ ರಸ್ತೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ರಸ್ತೆ ಅಭಿವೃದ್ಧಿಗೆ ಸಣ್ಣೇನಳ್ಳಿ ಗ್ರಾಮದಲ್ಲಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಅಂದಾಜು ಆರು ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಈ ರಸ್ತೆ ಅಭಿವೃದ್ಧಿಯಿಂದ ಸಣ್ಣೇನಹಳ್ಳಿ ಬೆಳಗುಂಬ ಮಲ್ಲೇನಹಳ್ಳಿ ಹಾಗೂ ಶಿವಪುರ ಗ್ರಾಮಗಳ ಬೆಳವಣಿಗೆಗೆ ಮಾತ್ರವಲ್ಲ, ಈ ಭಾಗದಲ್ಲಿ ಬರುವ ಸುತ್ತ ಹತ್ತಾರು ಹಳ್ಳಿಗಳ ಬೆಳವಣಿಗೆಗೆ ಪೂರಕವಾಗಲಿದೆ ಎಂದರು. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಚುನಾಯಿತನಾದ ಬಳಿಕ ನನ್ನ ಅಂತ ಕರಣ ಒಪ್ಪುವಂತೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.ಜನಪ್ರಿಯವಾಗಿರುವ ಸರ್ಕಾರದ ಪಂಚ ಗ್ಯಾರಂಟಿಗಳು ಮುಂದುವರಿಸುತ್ತಾ ಅಭಿವೃದ್ಧಿ ಪಥದಲ್ಲಿ ರಾಜ್ಯವನ್ನು ಕೊಂಡೊಯ್ಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಪ್ರಶ್ನಾರ್ಹವಾಗಿದೆ. ಸಮಾರಂಭದಲ್ಲಿ ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು, ಮಾಜಿ ಅಧ್ಯಕ್ಷ ಮಂಜು ರಾಜ್, ಮುಖಂಡರಾದ ಮಲ್ಲೇನಹಳ್ಳಿ ಶಿವಶಂಕರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಮ್ಮ, ಗ್ರಾಮದ ಮುಖಂಡರಾದ ಮಿಥುನ್, ಮಲ್ಲಿಕಾರ್ಜುನ್, ಗುತ್ತಿಗೆದಾರರ ಉಮೇಶ್ ಕಟಾರಿಯ ಮತ್ತು ಇತರರು ಉಪಸ್ಥಿತರಿದ್ದರು