ಈ ಐತಿಹಾಸಿಕ ಗೆಲುವು ಮುಂದಿನ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು.
ಶಿರಸಿ: ರಾಜ್ಯದ ನಾಲ್ಕು ಪದವೀಧರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪ್ರಜ್ಞಾವಂತ ಪದವೀಧರ ಮತದಾರರು ರಾಜ್ಯದ ಮತ್ತು ದೇಶದ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ ಸಂತೋಷ ತಿಳಿಸಿದರು.
ಬುಧವಾರ ನಗರದ ಪೋಸ್ಟ್ ಆಫೀಸ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾತನಾಡಿದ ಅವರು, ಈ ಐತಿಹಾಸಿಕ ಗೆಲುವು ಮುಂದಿನ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದರು.ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಉಪೇಂದ್ರ ಪೈ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನಂದನ್ ಸಾಗರ್, ವೀಣಾ ಶೆಟ್ಟಿ, ನಾಗರಾಜ ನಾಯ್ಕ, ರಾಕೇಶ ತಿರುಮಲೆ, ರಾಜು ಶೆಟ್ಟಿ, ಶ್ರೀಕಾಂತ ನಾಯ್ಕ, ರಮಾಕಾಂತ ಭಟ್, ವಿಶಾಲ ಮರಾಠೆ, ಮಾಂತೇಶ ಹಾದಿಮನೆ, ನಾಗರಾಜ ನಾಯ್ಕ, ಕುಮಾರ ಬೋರ್ಕರ್, ಮಹೇಂದ್ರ ಮುರ್ಡೇಶ್ವರ್, ಡೋನಿ ಬೇಸಿಲ್ ಸೇರಿದಂತೆ ಅನೇಕರು ಇದ್ದರು.ಚುನಾವಣೆ ಗೆಲುವು ಮುಂದಿನ ಚುನಾವಣೆಗೆ ದಿಕ್ಸೂಚಿ: ರೂಪಾಲಿ ನಾಯ್ಕಕಾರವಾರ: ವಿಧಾನ ಪರಿಷತ್ ಚುನಾವಣೆ ನಡೆದ ಎಲ್ಲ ನಾಲ್ಕು ಕ್ಷೇತ್ರಗಳಲ್ಲಿ ಹಾಗೂ ವಿಶೇಷವಾಗಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹರ್ಷ ವ್ಯಕ್ತಪಡಿಸಿದ್ದಾರೆ ಹಾಗೂ ಈ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಪದವೀಧರ ಮತದಾರರು ಎನ್ಡಿಎ ಅಭ್ಯರ್ಥಿಯ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿರುವುದು ಸಂತಸ ತಂದಿದೆ. ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಹಿತಾಸಕ್ತಿಗಳನ್ನು ಕಾಪಾಡುವುದು ಹಾಗೂ ಅವರ ಧ್ವನಿಯಾಗಿ ಕೆಲಸ ಮಾಡುವುದಕ್ಕೆ ಸದಾ ಬದ್ಧವಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.ಹ್ಯಾಟ್ರಿಕ್ ಗೆಲುವು ಸಾಧಿಸಿದ ಎಸ್.ವಿ. ಸಂಕನೂರ ಅವರಿಗೆ ಅಭಿನಂದನೆಗಳು. ಪದವೀಧರ ಮತದಾರರು, ಎಲ್ಲ ನಾಲ್ಕೂ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ರೂಪಾಲಿ ಎಸ್. ನಾಯ್ಕ ಅಭಿನಂದನೆ ಸಲ್ಲಿಸಿದ್ದಾರೆ.ಮತದಾರರ ತಿರುಗೇಟು: ಇವಿಎಂ ಬಗ್ಗೆ ನಿರಂತರವಾಗಿ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಈಗ ಬ್ಯಾಲೆಟ್ ಪೇಪರ್ ಮೂಲಕ ಮತದಾರರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ದುರಹಂಕಾರಿ ವರ್ತನೆ, ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ರೂಪಾಲಿ ಎಸ್. ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.