ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲಬಸವನಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಹಾಗೂ ವಿಮಾನ ಗೋಪುರ ಕಲಶ ಪ್ರತಿಷ್ಠಾಪನಾ ಮಹೋತ್ಸವ ಜರುಗಿತು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಗೌಡ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು ಸಮಸ್ತ ಬಾಲಬಸವನಹಳ್ಳಿ ಗ್ರಾಮಸ್ಥರು, ಸ್ಥಳೀಯ ಮುಖಂಡರುಗಳು ಹಾಗೂ ದಾನಿಗಳ ಸಹಕಾರದಿಂದ ಇಂದು ಶ್ರೀ ವೀರಾಂಜನೇಯ ಸ್ವಾಮಿಯ ದೇವಸ್ಥಾನ ಉತ್ತಮವಾಗಿ ನಿರ್ಮಾಣಗೊಂಡು, ಉದ್ಘಾಟನೆ ಆಗಿರುವುದು ಖುಷಿ ತಂದಿದೆ. ಮುಂದಿನ ದಿನಗಳಲ್ಲಿಯೂ ಸಹ ಅಭಿವೃದ್ಧಿ ಕೆಲಸಕ್ಕೆ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜು, ಮುಖಂಡರಾದ ಉಮೇಶ್ ಗೌಡ, ರಮೇಶ್ ಬಾಬು, ರಾಮೇಗೌಡ, ರಂಗನಾಥ್, ರಂಗಪ್ಪ, ರಾಮಣ್ಣ, ರಾಮಲಿಂಗಯ್ಯ ಸೇರಿದಂತೆ ಗ್ರಾಮದ ಅನೇಕ ಗ್ರಾಮಸ್ಥರು ಭಾಗಿಯಾಗಿದ್ದರು.