ಸಾರಾಂಶ
ಕನ್ನಡಪ್ರಭ ವಾರ್ತೆ ಗುಡಿಬಂಡೆ
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿಯಲ್ಲಿ ಕೈಗೊಳ್ಳಬೇಕಾದ ಜಲಮೂಲಗಳ ಪುನಃಶ್ಚೇತನ, ಹಸಿರು ಜಾಗ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಗುಡಿಬಂಡೆ ಪ.ಪಂ. ಅಧ್ಯಕ್ಷ ಎ.ವಿಕಾಸ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ಗುಡಿಬಂಡೆ ಪ.ಪಂ.ಗೆ ಬಿಡುಗಡೆಯಾದ ವಿವಿಧ ಯೋಜನೆಗಳ ಅನುದಾನದಲ್ಲಿ ಉಳಿಕೆಯಾದ ಮೊತ್ತಕ್ಕೆ ಉಳಿತಾಯದ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಲು ನಿರ್ಧರಿಸಲಾಯಿತು.
ಮಂಡಲಿ ಅನುಮೋದನೆಎಸ್.ಎಫ್.ಸಿ ಮುಕ್ತನಿಧಿ ಅನುದಾನದ ಶೆ.22.75, 7.25 ಹಾಗೂ 5 ಯೋಜನೆಯಡಿ ನಿಗದಿಪಡಿಸಿದ ಅನುದಾನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವುದು, ಕೇಂದ್ರ ಸರ್ಕಾರದ ಅಮೃತ್ 2.0 ಯೋಜನೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ಆಡಳಿತ ಮಂಡಳಿಯಿಂದ ಅನುಮೋದನೆ ಪಡೆಯಲಾಯಿತು.
ಇ- ಖಾತೆ ಅವ್ಯವಸ್ಥೆಇದೇ ಸಮಯದಲ್ಲಿ 8ನೇ ವಾರ್ಡಿನ ಸದಸ್ಯ ಬಾಬು, ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಅಕ್ರಮ ಇ-ಖಾತೆಗಳು ಎಂದು ಸುದ್ದಿಗಳು ಹರಿದಾಡುತ್ತಿವೆ. ಇದರಲ್ಲಿ ಪ.ಪಂ ಸದಸ್ಯರು ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಾರೆ. ಇ-ಖಾತೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಪ.ಪಂ ಮುಖ್ಯಾಧಿಕಾರಿಗಳು ಸರಿಯಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಪ.ಪಂ ಉಪಾಧ್ಯಕ್ಷ ಗಂಗರಾಜು, ಮುಖ್ಯಾಧಿಕಾರಿ ಶ್ರೀನಿವಾಸ್, ಸದಸ್ಯರಾದ ಬಷೀರ್, ರಾಜೇಶ್, ವೀಣಾ, ಮಂಜುಳ, ನಗೀನ್ ತಾಜ್, ಅನುಷಾ, ಜಿ.ರಾಜೇಶ್, ಪ.ಪಂ ಸಿಬ್ಬಂದಿ ಚಕ್ರಪಾಣಿ, ಬಾಲಪ್ಪ ಸೇರಿದಂತೆ ಹಲವರು ಇದ್ದರು.