ನೀರಿನ ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಎಡಿಸಿ ಶಿವಾನಂದ

| Published : Nov 07 2024, 11:57 PM IST

ನೀರಿನ ಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಎಡಿಸಿ ಶಿವಾನಂದ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರು ಜಿಪಂ ಸಭಾಂಗಣದಲ್ಲಿ ಇದೇ ನ.20ವರೆಗೆ ಜಲ ಜೀವನ ಮಿಷನ್ ಯೋಜನೆಯಡಿಯಲ್ಲಿ ಹಮ್ಮಿಕೊಳ್ಳಲಾಗಿರುವ ಜಲೋತ್ಸವ ಆಂದೋಲನಕ್ಕೆ ಗಣ್ಯರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ನೀರು ಅಮೂಲ್ಯ ವಸ್ತು, ಅದನ್ನು ಪೋಲಾಗದಂತೆ ಮಿತ ಬಳಕೆ ಮಾಡಬೇಕು ಹಾಗೂ ನೀರಿನ ಮೂಲಗಳನ್ನು ಸಂರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಹೇಳಿದರು.

ಸ್ಥಳೀಯ ಜಿಪಂ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ ಕಾರ್ಯಕ್ರಮದಡಿಯಲ್ಲಿ ಜಲಶಕ್ತಿ ಮಂತ್ರಾಲಯ, ಜಿಲ್ಲಾಡಳಿತ, ಜಿಪಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ನ.6 ರಿಂದ 20ವರೆಗೆ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಹಮ್ಮಿಕೊಳ್ಳಲಾಗಿರುವ ಜಲೋತ್ಸವ ಆಂದೋಲನಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ರಾಯಚೂರು ಹಾಗೂ ತಾಲೂಕುಗಳಲ್ಲಿ ಜಲ ಮೂಲಗಳ ಜಲ ಸುಸ್ಥಿರತೆಯ ಕುರಿತು ಸಾರ್ವಜನಿಕರಲ್ಲಿ ವ್ಯಾಪಕವಾದ ಅರಿವು ಮೂಡಿಸಲು ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಬೇಕು. ನೀತಿ ಆಯೋಗವು ರಾಯಚೂರ ಜಿಲ್ಲೆಯನ್ನು ಮಹತ್ವಾಕಾಂಕ್ಷೆ ಜಿಲ್ಲೆಯನ್ನಾಗಿ ಆಯ್ಕೆ ಮಾಡಿದ್ದು, ಈ ನಿಟ್ಟಿನಲ್ಲಿ ನಮಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಲೋತ್ಸವ ಕುರಿತು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಇದಕ್ಕೂ ಮುಂಚೆ ಪ್ರಾಸ್ತಾವಿಕವಾಗಿ ದೇವದುರ್ಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹೀರಾಲಾಲ್ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಿಪಂ ಮುಖ್ಯಯೋಜನಾ ನಿರ್ದೇಶಕ ಡಾ.ಟಿ.ರೋಣಿ, ಮುಖ್ಯಲೆಕ್ಕಾಧಿಕಾರಿಗಳಾದ ವಿಜಯ ಶಂಕರ್, ಯೋಜನಾ ನಿರ್ದೇಶಕ ಶರಣಬಸವ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಿ.ಬಿ.ಚವ್ಹಾಣ, ಜಿಲ್ಲಾ ಯೋಜನಾ ವ್ಯವಸ್ಥಾಪಕ ಬಸವರಾಜ ಗಲಗಿನ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.