ಸಾರಾಂಶ
ಚಿಕ್ಕಮಗಳೂರುಜಿಲ್ಲೆಯಲ್ಲಿ ಗರ್ಭಿಣಿಯರು ಹಾಗೂ ಶಿಶು ಮರಣ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಜಿಲ್ಲೆಯಲ್ಲಿ ಗರ್ಭಿಣಿಯರು ಹಾಗೂ ಶಿಶು ಮರಣ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಅಭಿಯಾನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಗರ್ಭಿಣಿಯರ ಸಾವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಗರ್ಭಿಣಿಯರು ಚಿಕಿತ್ಸೆಗೆ ಬರುವಾಗ ಅವರಿಗೆ ಸರಿಯಾದ ಮಾರ್ಗದರ್ಶನ, ಚಿಕಿತ್ಸೆ ಹಾಗೂ ಅವರಿಗೆ ಬೇಕಾದ ಮಾರ್ಗದರ್ಶನವನ್ನು ಸೂಕ್ತ ಸಮಯದಲ್ಲಿ ನೀಡಲು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಶಿಕ್ಷಕಿಯರು, ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚಿಸಬೇಕು.ಯುವ ಜನತೆ ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಿದ ಅವರು, ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ಮೂಡಿಸುವ ವಿವಿಧ ಅರಿವು ಕಾರ್ಯಕ್ರಮ ಹಾಗೂ ಪ್ರಚಾರ ಸಾಮಾಗ್ರಿಗಳನ್ನು ಸಾರ್ವಜನಿಕರಿಗೆ ವಿತರಿಸಬೇಕು.
ಮಹಿಳೆಯರು ಮತ್ತು ಮಕ್ಕಳ ನಿರ್ಧಿಷ್ಟ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಆರೋಗ್ಯವಂತ ಸಮಾಜ ನಿರ್ಮಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಚ್.ಎಸ್. ಕೀರ್ತನಾ, ಡಿವೈಎಸ್‌ಪಿ ಶೈಲೇಂದ್ರ, ಡಿಎಚ್‌ಒ ಡಾ. ಅಶ್ವತ್ ಬಾಬು, ಆರ್‌ಸಿಎಚ್ ಡಾ. ಭರತ್, ಡಿ.ಎಸ್. ಸೋಮಶೇಖರ್, ಡಾ. ಮಂಜುನಾಥ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿದ್ದರು.
25 ಕೆಸಿಕೆಎಂ 2ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಆರೋಗ್ಯ ಅಭಿಯಾನ ಸಭೆ ನಡೆಯಿತು. ಜಿಪಂ ಸಿಇಓ ಕೀರ್ತನಾ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))