ಸಾರಾಂಶ
ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯಕ್ಕೆ ಕಪ್ಪುಚುಕ್ಕೆ ತಂದು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ವಿರೋಧಿಸಿ ನಗರದ ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ವಿಚಾರವನ್ನು ನೆಪವಾಗಿಸಿಕೊಂಡು ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಶುದ್ಧ ರಾಜಕಾರಣಕ್ಕೆ ಕಪ್ಪು ಮಸಿ ಬಳಿಯಲು ಮುಂದಾಗಿವೆ ಎಂದು ದೂಷಿಸಿದರು.ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ. ಇವರ ಷಡ್ಯಂತ್ರ ಫಲಿಸುವುದಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ಬಣ್ಣ ಬಯಲಾಗಿ ಮುಖಭಂಗ ಅನುಭವಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಕೆ.ಎಚ್.ನಾಗರಾಜು, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಎಲ್.ಸಂದೇಶ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಹಳುವಾಡಿ ವೆಂಕಟೇಶ್, ದೊಡ್ಡಯ್ಯ, ಗುರುಕುಮಾರ್, ವಿಜಯಲಕ್ಷ್ಮೀ ರಘುನಂದನ್, ಕರಡಿಕೊಪ್ಪಲು ಪುಟ್ಟಸ್ವಾಮಿ, ತಗ್ಗಹಳ್ಳಿ ಯಶೋದಾ, ಸುಂಡಹಳ್ಳಿ ಮಂಜುನಾಥ್, ಶಿವನಂಜು ಇತರರಿದ್ದರು.