ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ

| Published : Jan 01 2024, 01:15 AM IST

ಮೈಸೂರಲ್ಲಿ ಮುಖ್ಯಮಂತ್ರಿ ಪುತ್ರನ ಗೆಲ್ಲಿಸಲು ಷಡ್ಯಂತ್ರ: ಪ್ರತಾಪ್‌ಸಿಂಹ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಗೆಲ್ಲಿಸಲು ತನ್ನ ವಿರುದ್ಧ ಆರೋಪ, ಕುಟುಂಬವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್‌ಸಿಂಹ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕೊಡಗು-ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ತನ್ನ ಪುತ್ರ ಯತೀಂದ್ರ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು -ಮೈಸೂರು ಮತದಾರರ ನಂಬಿಕೆ ತನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದೇನೆ. ಸತ್ಯವನ್ನು ಅರಗಿಸಿಕೊಳ್ಳಲಾರದ ಕಾಂಗ್ರೆಸ್ ನನ್ನವಿರುದ್ಧ ಷಡ್ಯಂತ್ರ ಹೂಡಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ನಾಪೋಕ್ಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಮೇಲೆ ದ್ವೇಷ ರಾಜಕೀಯ ಮಾಡುತ್ತಿದೆ. ರಾಜ್ಯದ ಜನತೆ ಎಲ್ಲವನ್ನು ಕೂಡ ಗಮನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಸಿದ್ದರಾಮಯ್ಯ ಷಡ್ಯಂತ್ರ ಮಾಡಿದ್ದಾರೆ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ತಮ್ಮ ವಿಕ್ರಂಸಿಂಹನನ್ನು ವಿಚಾರಣೆ ಮಾಡುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ಸಹೋದರನ ಹೆಸರು ಇಲ್ಲದಿದ್ದರೂ ಆತನನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಸಚಿವ ಮಧು ಬಂಗಾರಪ್ಪ ವಿರುದ್ಧ 6.50 ಕೋಟಿ ರು. ಚೆಕ್ ಅಮಾನ್ಯ ಪ್ರಕರಣದಲ್ಲಿ ಶಿಕ್ಷೆ ಆಗಿದೆ. ಸಚಿವ ಮಧು ತಪ್ಪಿತಸ್ಥ ಅಂಥ ಕೋರ್ಟ್ ಹೇಳಿದೆ. ಈ ಪ್ರಕರಣದ ಗಮನ ಬೇರೆಡೆ ಸೆಳೆಯಲು ನನ್ನ ತಮ್ಮನ ಪ್ರಕರಣಕ್ಕೆ ಸರ್ಕಾರ ಗಮನ ನೀಡಿದೆ ಎಂದು ಸಂಸದ ಹೇಳಿದರು.