ಶಿವಮೊಗ್ಗ: ಇಲ್ಲಿನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್(26) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 26ರಂದು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದಾಗ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎನ್ನಲಾಗಿದ್ದು, ಮೃತರು ಪತ್ನಿ, ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸಂತಾಪ: ಯುವ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಕೆಎಸ್ಆರ್‌ಪಿ 8ನೇ ಪಡೆಯ ಕಮಾಂಡೆಂಟ್ ಆದ ಎಸ್. ಯುವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕಮಾಂಡೆಂಟ್ ಕೋರಿದ್ದಾರೆ.
ಕರ್ತವ್ಯ ನಿರತ ಕಾನ್ಸ್ಟೆಬಲ್ ಹೃದಯಾಘಾತದಿಂದ ನಿಧನ
ಇಲ್ಲಿನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್(26) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.