ಬಿಜೆಪಿಯಿಂದ ಮಾತ್ರ ಕ್ಷೇತ್ರ ಸಮಗ್ರ ಅಭಿವೃದ್ಧಿ ಸಾಧ್ಯ: ಜಿ.ಎಂ.ಸಿದ್ದೇಶ್ವರ್

| Published : May 02 2024, 01:34 AM IST

ಬಿಜೆಪಿಯಿಂದ ಮಾತ್ರ ಕ್ಷೇತ್ರ ಸಮಗ್ರ ಅಭಿವೃದ್ಧಿ ಸಾಧ್ಯ: ಜಿ.ಎಂ.ಸಿದ್ದೇಶ್ವರ್
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ. ಈ ಬಾರಿ ನಮ್ಮಅಭ್ಯರ್ಥಿ ಗೆಲುವು ಖಚಿತ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.

- ಪತ್ನಿ ಗಾಯತ್ರಿ ಪರ ಮನೆ ಮನೆಗೂ ತಲುಪಿ ಸಂಸದ ಪ್ರಚಾರ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ. ಈ ಬಾರಿ ನಮ್ಮಅಭ್ಯರ್ಥಿ ಗೆಲುವು ಖಚಿತ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಹೇಳಿದರು.

ನಗರದ ಗಾಂಧಿನಗರದಲ್ಲಿ ಪತ್ನಿ ಗಾಯತ್ರಿ ಸಿದ್ದೇಶ್ವರ್ ಪರ ಮತಯಾಚಿಸಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಭಾ.ಜ.ಪ. ಸಂಕಲ್ಪ ಮಾಡಿದೆ. ಮೋದಿ ಪ್ರಧಾನಿ ಆಗಿ 10 ವರ್ಷದಲ್ಲೇ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ರಾಷ್ಟ್ರೀಯ ಹೆದ್ದಾರಿ, ಏರ್ ಫೋರ್ಟ್, ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ರಂಗಗಳ ಅಭಿವೃದ್ಧಿ ಮೋದಿ ಒತ್ತು ನೀಡಿದ್ದಾರೆ. ಇಂತಹ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದರೆ, ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೆಚ್ಚಿನ ಅಂತರಗಳಿಂದ ಗೆದ್ದು ದೆಹಲಿ ಪಾರ್ಲಿಮೆಂಟ್‌ಗೆ ಹೋಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಇನ್ನು 6 ದಿನ ಮನೆ ಮನೆಗೆ ಹೋಗಿ ಮತ ಕೇಳಬೇಕು ಎಂದು ಮನವಿ ಮಾಡಿದ ಅವರು, ನಿಮ್ಮ ಅಮೂಲ್ಯ ಮತಗಳನ್ನು ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ನೀಡುವಂತೆ ಕೋರಿದರು.

ವಿಧಾನ ಪರಿಷತ್ತು ಸದಸ್ಯ ನಾರಾಯಣಸ್ವಾಮಿ, ಮಾಜಿ ಮೇಯರ್ ಬಿ.ಜಿ. ಅಜಯ್‌ಕುಮಾರ್, ವಿಧಾನ ಪರಿಷತ್ತು ಸದಸ್ಯರಾದ ಸಂಗಮೇಶ್ ನಿರಾಣಿ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್‌ ಜಾಧವ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಮುಖಂಡರಾದ ದೇವರಮನೆ ಶಿವಕುಮಾರ್, ಪುರುಷೋತ್ತಮ್, ಹಾಲೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಜೊತೆಯಲ್ಲಿದ್ದರು.

- - - -1ಕೆಡಿವಿಜಿ32ಃ:

ದಾವಣಗೆರೆ ಗಾಂಧಿನಗರದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಪತ್ನಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮತಯಾಚನೆ ಮಾಡಿದರು.