ಸಂವಿಧಾನ ಎಲ್ಲಾ ಸಮಾಜಗಳಿಗೂ ಅನ್ವಯ: ಭಂಡಾರಿ

| Published : Feb 12 2024, 01:34 AM IST

ಸಂವಿಧಾನ ಎಲ್ಲಾ ಸಮಾಜಗಳಿಗೂ ಅನ್ವಯ: ಭಂಡಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಫೆ. 18ರಂದು ಕಡೂರು ಪಟ್ಟಣಕ್ಕೆ ಆಗಮಿಸುತ್ತಿರುವ ದೇಶದ ಸಂವಿಧಾನ ಜಾಗೃತಿ ಜಾಥಾವನ್ನು ಸರ್ವ ಧರ್ಮ ದವರೂ ಸೇರಿ ಬರಮಾಡಿಕೊಳ್ಳ ಲಾಗುವುದು ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ರಸಭೆ ಕನಕ ಸಭಾಂಗಣದಲ್ಲಿ ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ, ಕಡೂರು

ಫೆ. 18ರಂದು ಕಡೂರು ಪಟ್ಟಣಕ್ಕೆ ಆಗಮಿಸುತ್ತಿರುವ ದೇಶದ ಸಂವಿಧಾನ ಜಾಗೃತಿ ಜಾಥಾವನ್ನು ಸರ್ವ ಧರ್ಮ ದವರೂ ಸೇರಿ ಬರಮಾಡಿಕೊಳ್ಳ ಲಾಗುವುದು ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಪುರಸಭೆ ಕನಕ ಸಭಾಂಗಣದಲ್ಲಿ ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ನಮ್ಮ ಸಂವಿಧಾನ ಜಾರಿಗೆ ಬಂದು ಇಲ್ಲಿಗೆ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನ ಜಾಗೃತಿ ಮೂಡಿಸಲು ರಥ ಯಾತ್ರೆ ಕಡೂರು ಪಟ್ಟಣಕ್ಕೆ ಫೆ.18 ರಂದು ಬರಲಿದೆ. ಅಂದು ಪಟ್ಟಣದಲ್ಲಿ ಹಬ್ಬದಂತೆ ತಳಿರುತೋರಣ, ಬಾಳೆ ಕಂದುಗಳಿಂದ ಸಿಂಗರಿಸಿ ಯಾತ್ರೆಯನ್ನು ಬರಮಾಡಿ ಕೊಳ್ಳಲಾಗುವುದು ಪಟ್ಟಣದ ಸಾರ್ವಜನಿಕರು ತಪ್ಪದೇ ರಥಯಾತ್ರೆಯಲ್ಲಿ ಭಾಗವಹಿಸಿ ಸಂವಿಧಾನಕ್ಕೆ ಗೌರವಿಸೋಣ ಎಂದರು.ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮೂಲಕ ರಥಯಾತ್ರೆಯನ್ನು ಮುಂದಿನ ಊರಿಗೆ ಕಳುಹಿಸಿ ಕೊಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ ಎಂದು ಮನವಿ ಮಾಡಿದರು.

ಪುರಸಭೆ ಹಿರಿಯ ಸದಸ್ಯ ತೋಟದಮನೆ ಮೋಹನ್ ಮಾತನಾಡಿ, ರಥಯಾತ್ರೆಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ನಂತರ ಬೀಳ್ಕೊಡಲಾಗುವುದು.ಇದಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದ್ದು ಎಲ್ಲರೂ ಬನ್ನಿ ಸಂವಿಧಾನ ರಥವನ್ನು ಎಳೆಯೋಣ ಎಂದರು.

ಪುರಸಭೆ ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಜಾಗೃತಿ ಮೂಡಿಸಲು ಕಡೂರು ಪಟ್ಟಣಕ್ಕೆ ಆಗಮಿಸುತ್ತಿರುವ ರಥಯಾತ್ರೆಯನ್ನು ಪಟ್ಟಣದ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ನೌಕರರು, ವಿವಿಧ ಇಲಾಖೆ ಅಧಿಕಾರಿಗಳು ನಾಗರಿಕರಿಂದ ಸ್ವಾಗತಿಸಲಾಗುವುದು ಎಂದರು.

ಪುರಸಭೆ ಸದಸ್ಯರಾದ ಈರಳ್ಳಿ ರಮೇಶ್, ತೋಟದ ಮನೆ ಮೋಹನ್, ಮಹಮದ್ ಯಾಸೀನ್ ಸಿಬ್ಬಂದಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಚಿನ್ನರಾಜ್, ಶಂಕರ್, ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ಮತ್ತಿತರರು ಸಭೆಯಲ್ಲಿ ಇದ್ದರು.

10ಕೆಕೆಡಿಯು2.

ಕಡೂರು ಪುರಸಭೆಯಲ್ಲಿ ಸಂವಿಧಾನ ಜಾಗೃತಿ ರಥ ಯಾತ್ರೆಯ ಆಗಮನದ ಪೂರ್ವಭಾವಿ ಸಭೆ ನಡೆಸಲಾಯಿತು.ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿದರು.ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್ ಇದ್ದರು.