ಚನ್ನರಾಯಪಟ್ಟಣ: ತಾಲೂಕು ಆಡಳಿತದ ವತಿಯಿಂದ ಬರುವ ಏಪ್ರಿಲ್ ೫ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ರಂದು ಸಂವಿಧಾನ ಶಿಲ್ಪಿ ಡಾ. ಬಿ. ಆರ್‌ ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿರುವ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಬಾಬು ಜಗಜೀವನರಾಮ್ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ದೇಶದ ೧೪೦ ಕೋಟಿ ಜನರು ನೆಮ್ಮದಿಯಿಂದ ಬದುಕಲು ಕಾರಣ. ಇಂತಹ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಮಹಾತ್ಮರಿಗೆ ನಿಜವಾದ ೩ ಮೇರೆಗೆ ಬರುವ ಏಪ್ರಿಲ್ ೫ರಂದು ಜಗಜೀವನರಾಂ ಅವರ ೧೧೯ನೇ ಜಯಂತ್ಯುತ್ಸವ ಕಾರ್ಯಕ್ರಮದ ಅ೦ಗವಾಗಿ ಮಿನಿವಿಧಾನಸೌಧ ಆವರಣದಲ್ಲಿ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಸಭೆಯಲ್ಲಿ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ, ಮುಖ್ಯಾಧಿಕಾರಿ ಆರ್.ಯತೀಶ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್ ಚನ್ನರಾಯಪಟ್ಟಣ ಪೊಲೀಸ್ ಎನ್.ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜು, ಪುರಸಭಾ ಮಾಜಿ ಅಧ್ಯಕ್ಷ ಮೋಹನ್‌ಕೋಟೆ, ದಲಿತ ಮುಖಂಡರಾದ ದಂಡೋರ ಮಂಜುನಾಥ್, ಬೆಳಗಿಹಳ್ಳಿ ಪುಟ್ಟಸ್ವಾಮಿ, ಆಲದಹಳ್ಳಿ ವೆಂಕಟೇಶ್, ಪ್ರಕಾಶ್, ಪರುಶುರಾಮ್, ಈಶ್ವರನ್, ಧರ್ಮಯ್ಯ, ರಂಗಪ್ಪ, ಸತೀಶ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ, ಪದಾಧಿಕಾರಿಗಳು ಉಪಸ್ಥಿತರಿದ್ದರು.