ಶನಿವಾರಸಂತೆ ವಿವಿದೆಢೆ ಸಂವಿಧಾನ ಜಾಗೃತಿ ಜಾಥಾ

| Published : Feb 07 2024, 01:48 AM IST

ಸಾರಾಂಶ

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆ ಶನಿವಾರಸಂತೆ ಗ್ರಾ.ಪಂ.ಮುಂಭಾಗ ಬಂದಾಗ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್ ಸೇರಿದಂತೆ ಗ್ರಾ.ಪಂ. ಸದಸ್ಯರು, ಪಿಡಿಒ ಹರೀಶ್, ಜಾಥಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಮಂಜುನಾಥ್ ಶೆಟ್ಟಿ ಸಮ್ಮುಖದಲ್ಲಿ ಜಾಥಾವನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ನಂತರ ಜಾಥಾ ಪಟ್ಟಣದ ಕೆಆರ್‌ಸಿ ವೃತ್ತದತ್ತ ಸಾಗಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಶನಿವಾರಸಂತೆ ಸೇರಿದಂತೆ ಈ ಭಾಗದ ವಿವಿಧ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆ ಶನಿವಾರಸಂತೆ ಗ್ರಾ.ಪಂ.ಮುಂಭಾಗ ಬಂದಾಗ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್ ಸೇರಿದಂತೆ ಗ್ರಾ.ಪಂ. ಸದಸ್ಯರು, ಪಿಡಿಒ ಹರೀಶ್, ಜಾಥಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಮಂಜುನಾಥ್ ಶೆಟ್ಟಿ ಸಮ್ಮುಖದಲ್ಲಿ ಜಾಥಾವನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ನಂತರ ಜಾಥಾ ಪಟ್ಟಣದ ಕೆಆರ್‌ಸಿ ವೃತ್ತದತ್ತ ಸಾಗಿತು.

ನಂತರ ನಡೆದ ಸಭೆಯಲ್ಲಿ ಸಂವಿಧಾನದ ಮಹತ್ವ, ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ದೇಶದ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು. ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯಲ್ಲಿ ಗ್ರಾ.ಪಂ. ಸದಸ್ಯರು, ಪಿಡಿಒ, ಸಿಬ್ಬಂದಿ ಸೇರಿದಂತೆ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ದಸಂಸ ಸಂಘಟನೆಯ ಪ್ರಮುಖರು, ಸದಸ್ಯರು, ಗ್ರಾ.ಪಂ.ಯ ಸಿಬ್ಬಂದಿ ಪಾಲ್ಗೊಂಡಿದ್ದರು ದುಂಡಳ್ಳಿಯಲ್ಲಿ ಜಾಗೃತಿ:

ಸಂವಿಧಾನ ಜಾಗೃತಿ ಜಾLe ಮೆರವಣಿಗೆ ದುಂಡಳ್ಳಿ ಗ್ರಾ.ಪಂ.ಗೆ ಬಂದಾಗ ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಸತ್ಯವತಿ ದೇವರಾಜ್, ಗ್ರಾ.ಪಂ.ಸದಸ್ಯರು, ಜಾಥಾ ಕಾರ್ಯಕ್ರಮದ ನೋಡಲ್ ಅಧಿಕಾರಿ ಮಂಜುನಾಥ್ ಶೆಟ್ಟಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿ ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಮಹಿಳೆಯರು ಜಾಥಾಕ್ಕೆ ಕಳಸ ಹಿಡಿದು ಸ್ವಾಗತಿಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನದ ಮಹತ್ವ ಹಾಗೂ ಜಾಥ ಕಾರ್ಯಕ್ರಮದ ಕುರಿತು ಮಂಡ್ಯದ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಲೋಕೇಶ್ ಮಾತನಾಡಿದರು. ಸಂವಿಧಾನ ಜಾಥಾ ಕಾರ್ಯಕ್ರಮದ ಮೆರವಣಿಗೆಯಲ್ಲಿ ಗ್ರಾ.ಪಂ. ಸದಸ್ಯರು, ಪಿಡಿಒ ಆಯಿಷಾ ಬಾನು, ಗ್ರಾ.ಪಂ.ಸಿಬ್ಬಂದಿ ಸೇರಿದಂತೆ ಗ್ರಾ.ಪಂ.ವ್ಯಾಪ್ತಿಯ ನಾನಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಸಿಬ್ಬಂದಿ, ದಸಂಸ ಸಂಘಟನೆಯ ಪ್ರಮುಖರು, ಸದಸ್ಯರು, ವಿವಿಧ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.