ಸತ್ತೇಗಾಲ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ

| Published : Feb 01 2024, 02:05 AM IST

ಸಾರಾಂಶ

ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಗ್ರಾಮಸ್ಥರು, ಯುವಕರು ಸೇರಿದಂತೆ ನೂರಾರು ಮಂದಿ ಸಂಭ್ರಮದಿಂದ ‌ಪಾಲ್ಗೊಂಡು ಮೆರವಣಿಗೆ ನಡೆಸಿದರು. ಸತ್ತೇಗಾಲ ಗ್ರಾಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಹಾಗೂ ಗ್ರಾಮಸ್ಥರು ಸಂವಿಧಾನ ಜಾಗೃತಿ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ, ಬಳಿಕ ವಿವಿಧ ಕಲಾ ತಂಡಗಳು ಹಾಗೂ ಪೂರ್ಣಕುಂಭಮೇಳದೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.

ಕನ್ನಡಪ್ರಭವಾರ್ತೆ ಕೊಳ್ಳೇಗಾಲ

ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಗ್ರಾಮಸ್ಥರು, ಯುವಕರು ಸೇರಿದಂತೆ ನೂರಾರು ಮಂದಿ ಸಂಭ್ರಮದಿಂದ ‌ಪಾಲ್ಗೊಂಡು ಮೆರವಣಿಗೆ ನಡೆಸಿದರು. ಸತ್ತೇಗಾಲ ಗ್ರಾಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಹಾಗೂ ಗ್ರಾಮಸ್ಥರು ಸಂವಿಧಾನ ಜಾಗೃತಿ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ, ಬಳಿಕ ವಿವಿಧ ಕಲಾ ತಂಡಗಳು ಹಾಗೂ ಪೂರ್ಣಕುಂಭಮೇಳದೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.ತಾಪಂ ಇಒ ಶ್ರೀನಿವಾಸ್ ಮಾತನಾಡಿ, ಸಂವಿಧಾನ ಒಂದು ಆಚರಣೆ ಮಾಡಿ ಸೀಮಿತ ಮಾಡದೇ, ತಮ್ಮ ಮನೆ ಮನೆಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದರು. ಸಂವಿಧಾನ ಮೌಲ್ಯಗಳು ಜೀವಂತವಾಗಿರಬೇಕೆಂಬ ಉದ್ದೇಶದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಹಿಂದಿನ ಕಾಲದಲ್ಲಿ ಮಹಿಳೆಯರ ಮಾತನ್ನು ಆಡದ ಸ್ಥಿತಿಯಲ್ಲಿದ್ದವರಿಗೆ ಸಂವಿಧಾನದ ಮೂಲಕ ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡಿ ಸಮಾನವಾಗಿ ಬದುಕುವ ಅವಕಾಶ ಕಲ್ಪಿಸಿಕೊಟ್ಟಿದೆ. ಆದ್ದರಿಂದ ನಮ್ಮೆಲ್ಲ ಮಹಿಳಾ ಬಂಧುಗಳು ಸಂವಿಧಾನ ಮೌಲ್ಯಗಳನ್ನು ಮರೆಯಬಾರದು ಎಂದರು. ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿರುವ ಸಂವಿಧಾನದಲ್ಲಿ ಪ್ರತಿಯೊಂದು ಜನಾಂಗಕ್ಕೂ ಮೀಸಲಾತಿ ನೀಡಿದ್ದಾರೆ. ಆದ್ದರಿಂದ ಸಂವಿಧಾನವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ಅದರಲ್ಲಿ ಏನಿದೆಂದು ತಿಳಿದುಕೊಂಡು ನಡೆಯಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ದ್ರಾಕ್ಷಾಯಿಣಿ ಅವರು ಸಂವಿಧಾನ ಪ್ರಸ್ತಾವನೆ ಭೋಧಿಸಿದರು. ಸಂಪನ್ಮೂಲ ವ್ಯಕ್ತಿ ಗಿರೀಶ್ ಬಾಬು ಮಾತನಾಡಿದರು. ಸಂವಿಧಾನ ಕುರಿತು ಆಯೋಜಿಸಿದ್ದ ಪ್ರಬಂಧ, ರಸಪ್ರಶ್ನೆ, ಆಶುಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಸತ್ತೇಗಾಲ ಗ್ರಾಪಂ ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷ ಸುವರ್ಣ, ಸದಸ್ಯರು ಮಲ್ಲೇಶ್, ಮಂಟಯ್ಯ, ಗೋವಿಂದರಾಜು, ಕವಿತಾ, ದೇವಿಕಾ, ಶಾಂತಕುಮಾರಿ, ನಾಗರಾಜು, ಮಲ್ಲೇಶ್, ಪ್ರಭುಸ್ವಾಮಿ, ಪಿಡಿಒ ಜುನೈದ್ ಅಹಮ್ಮದ್, ಕಾರ್ಯದರ್ಶಿ ಶಿವಪ್ರಸಾದ್, ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್, ಡಾ.ಬಿ.ಆರ್. ಅಂಬೇಡ್ಕರ್ ಸತ್ಯಾದ್ರಿ ಯುವಕ ಸಂಘದ ಪದಾಧಿಕಾರಿಗಳಿದ್ದರು.