ಸಾರಾಂಶ
ಭದ್ರಾವತಿ ತಾಲೂಕಿನಾದ್ಯಂತ 5 ದಿನ ಕಾಲ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಶುಕ್ರವಾರ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಇದಕ್ಕೂ ಮೊದಲು ಅಂಡರ್ ಬ್ರಿಡ್ಜ್ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಬ್ಯಾಂಡ್ ಸೆಟ್, ಗೃಹರಕ್ಷಕ ದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸೊಬಗು ಹೆಚ್ಚಿಸಿದವು.
ಕನ್ನಡಪ್ರಭ ವಾರ್ತೆ, ಭದ್ರಾವತಿ
ತಾಲೂಕಿನಾದ್ಯಂತ 5 ದಿನ ಕಾಲ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಶುಕ್ರವಾರ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು.ಇದಕ್ಕೂ ಮೊದಲು ಅಂಡರ್ ಬ್ರಿಡ್ಜ್ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಬ್ಯಾಂಡ್ ಸೆಟ್, ಗೃಹರಕ್ಷಕ ದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸೊಬಗು ಹೆಚ್ಚಿಸಿದವು.
ಮೆರವಣಿಗೆಯಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ನಗರಸಭೆ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಹಲವು ಇಲಾಖೆಗಳು ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕೈ ಜೋಡಿಸಿದ್ದವು.ಮೆರವಣಿಗೆ ನಗರದ ಹಾಲಪ್ಪ ವೃತ್ತ, ಚಾಮೇಗೌಡ ಏರಿಯಾ ರಸ್ತೆ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ, ತಾಲೂಕು ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ರಸ್ತೆ ಮಾರ್ಗವಾಗಿ ಕನಕ ಮಂಟಪ ತಲುಪಿತು.
ಅನಂತರ ನಡೆದ ಸಮಾರೋಪ ಸಮಾರಂಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್, ತಹಸೀಲ್ದಾರ್ ಕೆ.ಆರ್. ನಾಗರಾಜು, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ಉಪನಿರ್ದೇಶಕ ಗೋಪಾಲಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ. ಮಾಯಣ್ಣ, ಡಿಎಸ್ಎಸ್ ಮುಖಂಡರಾದ ಸತ್ಯ ಭದ್ರಾವತಿ, ಚಿನ್ನಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.- - - -ಡಿ22-ಬಿಡಿವಿಟಿ2:
ಭದ್ರಾವತಿ ನಗರದ ಅಂಡರ್ ಬ್ರಿಡ್ಜ್ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು.-ಡಿ22-ಬಿಡಿವಿಟಿ2(ಎ):ಭದ್ರಾವತಿಯಲ್ಲಿ ಶುಕ್ರವಾರ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಅದ್ಧೂರಿಯಿಂದ ನಡೆಯಿತು.