ಬೂದಗವಿ ಗ್ರಾಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ

| Published : Feb 13 2024, 12:45 AM IST / Updated: Feb 13 2024, 03:50 PM IST

ಬೂದಗವಿ ಗ್ರಾಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ
Share this Article
  • FB
  • TW
  • Linkdin
  • Email

ಸಾರಾಂಶ

ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಕಂಡಿದೆ

ಕನ್ನಡಪ್ರಭ ವಾರ್ತೆ ಕೊರಟಗೆರೆ

ತಾಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಕಂಡಿದೆ. ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮಕ್ಕೆ ಬಂದ ಸಂವಿಧಾನ ಜಾಗೃತಿ ಜಾಥಾ ರಥವನ್ನು ವಿವಿಧ ಕಲಾ ತಂಡಗಳೊಂದಿಗೆ ಕುಂಭ ಕಳಸ ಹೊತ್ತು ಮಹಿಳೆಯರು ಸ್ವಾಗತಿಸಿಕೊಂಡರು.

ತಾಲೂಕಿನಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಬೂದಗವಿ ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳನ್ನ ತಳಿರು ತೋರಣಗಳಿಂದ ಸಿಂಗರಿಸಿ ಅತ್ಯಂತ ಆತ್ಮೀಯವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು..

ಈ ಸಂದರ್ಭದಲ್ಲಿ ಮಾತನಾಡಿದ ಪಿಡಿಒ ರಘುನಂದನ್, ಅಂಬೇಡ್ಕರ್‌ ರಚಿಸಿರುವ ಸಂವಿಧಾನವನ್ನು ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಗೌರವಿಸಬೇಕು ಎಂದರು.

ದಲಿತ ಪರ ಸಂಘಟನೆಯ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಆಡಳಿತವು ನಾಲ್ಕು ದಿನಗಳ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಯೋಜಿಸಿ ಸಕಲ ಸಿದ್ಧತೆಗಳೊಂದಿಗೆ ಯಶಸ್ವಿ ಕಂಡಿದೆ. 

ಬಹಳ ಮುಖ್ಯವಾಗಿ ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವು ಭಾರತದ ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಎಂ.ಎಸ್. ಶ್ರೀನಿವಾಸ್, ಇಓ ಅಪೂರ್ಣ ಸಿ., ಎಇಇ ರವಿಕುಮಾರ್‌, ಸಮಾಜ ಕಲ್ಯಾಣ ಇಲಾಖೆಯ ಯಮುನಾ ಜಿ, ಬಿಸಿಎಂ ಇಲಾಖೆಯ ಅನಂತ್‌ರಾಮ್, ಬಿಇಇ ನಟರಾಜ್, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ, ದಲಿತ ಪರ ಸಂಘಟನೆಗಳ ಮುಖಂಡರಾದ ಶಿವರಾಮಯ್ಯ, ದೊಡ್ಡಯ್ಯ, ಸಿದ್ದೇಶ್, ಪತ್ರಕರ್ತ ಮಂಜುಸ್ವಾಮಿ ಎಂ.ಎನ್., ಸಿಆರ್‌ಪಿ ಮೋಹನ್, ಗ್ರಾಪಂ ಸಿಬ್ಬಂದಿ, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಇಂದಿರಾ ಗಾಂಧಿ ವಸತಿ ಶಾಲೆ ಮತ್ತು ಅಂಬೇಡ್ಕರ್‌ ಪ್ರೌಢ ಶಾಲೆಯ ಶಿಕ್ಷಕರು, ಶಾಲಾ ಮಕ್ಕಳು, ಸಾರ್ವಜನಿಕರು ಹಾಜರಿದ್ದರು.

ತುಂಬಾಡಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ

ಕೊರಟಗೆರೆ: ಭಾರತ ಸಂವಿಧಾನ ಜಾಗೃತಿ ಜಾಥಾದ ರಥ ತುಂಬಾಡಿ ಗ್ರಾಮಕ್ಕೆ ಆಗಮಿಸಿದಾಗ ಊರಿನ ಗ್ರಾಮಸ್ಥರು ಪೂರ್ಣಕುಂಭ ಕಳಸಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.

ನಂತರ ಬಾಬಾ ಸಾಹೇಬ ಅಂಬೇಡ್ಕರ್‌ ಅವರ ಪುತ್ಥಳಿಗೆ ಹೂವಿನ ಹಾರ ಹಾಕಿದರು.

ಗ್ರಾಪಂ ಅಧ್ಯಕ್ಷ ಹರೀಶ್ ಬಾಬು ಮಾತನಾಡಿ, ನಮ್ಮ ಭಾರತ ಸಂವಿಧಾನ ಜಾರಿಗೆ ಬಂದು 75 ವರ್ಷ ತುಂಬಿದ ಸಂದರ್ಭದಲ್ಲಿ ನಮ್ಮ ಘನ ಸರ್ಕಾರವು ಈ ಸಂವಿಧಾನ ಜಾಥಾ ಕಾರ್ಯಕ್ರಮವನ್ನು ಆಯೋಜಿಸಿದೆ. 

ಮನುಷ್ಯನ ಜೀವನ, ವಿದ್ಯಾಭ್ಯಾಸ, ಉದ್ಯೋಗ ಎಲ್ಲದಕ್ಕೂ ಅವಕಾಶ ಮಾಡಿ ಕೊಟ್ಟಿರುವುದೇ ನಮ್ಮ ಸಂವಿಧಾನ. ನಮ್ಮ ಸಂವಿಧಾನವನ್ನು ಇಡೀ ವಿಶ್ವವೇ ಒಪ್ಪಿದೆ ಎಂದು ತಿಳಿಸಿದರು.

ಪಿಡಿಒ ಪ್ರದೀಪ್ ಕುಮಾರ್‌ ಮಾತನಾಡಿ, ಇದೊಂದು ಹೆಮ್ಮೆಯ ಸಂಗತಿ, ಇಂತಹ ಕಾರ್ಯಕ್ರಮಕ್ಕೆ ತಾವೆಲ್ಲರೂ ಸಾಕ್ಷೀಭೂತರಾಗಿದ್ದು ನಮ್ಮ ಗ್ರಾಮ ಪಂಚಾಯಿತಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.