ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಹೆಗ್ಗಳಿಕೆ ಸಂವಿಧಾನಕ್ಕಿದೆ: ಡಾ.ಸ್ಮಿತಾರಾಮು

| Published : Jan 27 2025, 12:45 AM IST

ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಹೆಗ್ಗಳಿಕೆ ಸಂವಿಧಾನಕ್ಕಿದೆ: ಡಾ.ಸ್ಮಿತಾರಾಮು
Share this Article
  • FB
  • TW
  • Linkdin
  • Email

ಸಾರಾಂಶ

ಮದ್ದೂರು ಕ್ರೀಡಾಂಗಣದ ಅಭಿವೃದ್ಧಿಗೆ ತಾವು ಅಗತ್ಯ ಅನುದಾನ ಕೋರಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅನುದಾನ ಬಿಡುಗಡೆಯಾದ ನಂತರ ಪ್ರೇಕ್ಷಕರ ಗ್ಯಾಲರಿ ಅಭಿವೃದ್ಧಿ, ಬಿಸಿಲಿನ ರಕ್ಷಣೆಗಾಗಿ ಕಾಂಕ್ರೀಟ್ ಮೇಲ್ಚಾವಣಿ, ಕ್ರೀಡಾಂಗಣದ ಒಳಾಂಗಣ ಅಭಿವೃದ್ಧಿ ವ್ಯಾಯಾಮ ಶಾಲೆ ಹಾಗೂ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನವನ್ನು ಬಳಸಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ರಾಷ್ಟ್ರದ ಪ್ರತಿಯೊಬ್ಬ ಪ್ರಜೆಗೂ ಪರಸ್ಪರ ಸಮಾನತೆ ಎಂಬ ಹೆಗ್ಗಳಿಕೆ ನಮ್ಮ ಸಂವಿಧಾನಕ್ಕೆ ಇದೆ ಎಂದು ತಹಸೀಲ್ದಾರ್ ಡಾ.ಸ್ಮಿತಾರಾಮು ಭಾನುವಾರ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತದಿಂದ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದಲ್ಲಿ ಸಂವಿಧಾನ ಜಾರಿಗೆ ಬಂದು ದೇಶದ ಪ್ರತಿಯೊಬ್ಬ ಪ್ರಜೆಗೂ ಸಹ ಸಮಾನ ಶಿಕ್ಷಣ, ಮೂಲ ಸೌಲಭ್ಯ ಮತ್ತು ಶಿಕ್ಷಣ, ಧಾರ್ಮಿಕ ಹಕ್ಕುಗಳು ದೊರಕಿದೆ ಎಂದರು.

ಭಾರತದ ಸಂವಿಧಾನಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಕೊಡುಗೆ ನೀಡಿದ್ದಾರೆ. ನಾವುಗಳು ಸಂವಿಧಾನವನ್ನು ಗೌರವಿಸಿ ಅದರ ನಿಯಮಗಳನ್ನು ಅನುಸರಿಸುವ ಮೂಲಕ ಮೂಲ ಕರ್ತವ್ಯಗಳನ್ನು ಸಹ ಪಾಲಿಸುವುದು ಅತ್ಯಗತ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಮದ್ದೂರು ಕ್ರೀಡಾಂಗಣದ ಅಭಿವೃದ್ಧಿಗೆ ತಾವು ಅಗತ್ಯ ಅನುದಾನ ಕೋರಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅನುದಾನ ಬಿಡುಗಡೆಯಾದ ನಂತರ ಪ್ರೇಕ್ಷಕರ ಗ್ಯಾಲರಿ ಅಭಿವೃದ್ಧಿ, ಬಿಸಿಲಿನ ರಕ್ಷಣೆಗಾಗಿ ಕಾಂಕ್ರೀಟ್ ಮೇಲ್ಚಾವಣಿ, ಕ್ರೀಡಾಂಗಣದ ಒಳಾಂಗಣ ಅಭಿವೃದ್ಧಿ ವ್ಯಾಯಾಮ ಶಾಲೆ ಹಾಗೂ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರುಗಳನ್ನು ಅಭಿನಂದಿಸಲಾಯಿತು. ಪುರಸಭಾ ಅಧ್ಯಕ್ಷ ಕೋಕಿಲ ಅರುಣ, ಉಪಾಧ್ಯಕ್ಷ ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿಅಧ್ಯಕ್ಷ ಸಿದ್ದರಾಜು, ಸದಸ್ಯರಾದ ವನಿತಾ, ಸರ್ವಮಂಗಳ, ತಾಪಂ ಇಒ ರಾಮಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳಿರಯ್ಯ, ಪುರಸಭೆ ಮುಖ್ಯ ಅಧಿಕಾರಿ ಎಂ. ಮೀನಾಕ್ಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಶ್ರೀನರಸಿಂಹ ಸ್ವಾಮಿ ದೇವಾಲಯದ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದೊಂದಿಗೆ ಶಾಲಾ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು. ನಂತರ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಗಳೊಂದಿಗೆ ಆಕರ್ಷಕ ನೃತ್ಯ ಪ್ರದರ್ಶನ ನೀಡಿದರು.