ಸಾರಾಂಶ
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಜಾತ್ಯತೀತ ಸಿದ್ಧಾಂತದ ಮೇಲೆ ಸಮಾನತೆ ಆಧಾರದ ಮೇಲೆ ಸಂವಿಧಾನದ ಆಶಯಗಳನ್ನು ಜಾರಿ ಮಾಡಿರುವ ರಾಜಕೀಯ ಪಕ್ಷವಿದ್ದರೆ ಅದು ಕಾಂಗ್ರೆಸ್ ಪಕ್ಷ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಹಾಗೂ ಹಾಸನದಲ್ಲಿ ನಡೆಯುವ ಸ್ವಾಭಿಮಾನಿ ಸಮಾವೇಶದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ ಎಂದರು.ಎಲ್ಲರೂ ಕೂಡ ಸಂವಿಧಾನದ ಅಡಿಯಲ್ಲಿ ಹಲವಾರು ಜವಾಬ್ದಾರಿಗಳನ್ನು ಹಲವಾರು ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ವಿಶ್ವಜ್ಞಾನಿ ಎಂದು ಹೆಸರು ತೆಗೆದುಕೊಂಡಿರುವ ಅಂಬೇಡ್ಕರ್ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷವಾಗಿದ್ದು ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ,ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಅಪ್ಪಾಜಿ, ಕೀಲಾರ ರಾಧಾಕೃಷ್ಣ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್,ವಿಜಯಲಕ್ಷ್ಮಿ ರಘುನಂದನ್, ಸಾತನೂರು ಕೃಷ್ಣ, ಚಂದಗಾಲು ವಿಜಯ್ ಕುಮಾರ್ ದೀಪಕ್, ಚಿನಕುರಳಿ ರಮೇಶ್, ಸಿ.ಎಂ.ದ್ಯಾವಪ್ಪ,ಕಾಗೆಹಳ್ಳದದೊಡ್ಡಿ ರಾಮಕೃಷ್ಣ, ದೊಡ್ಡಯ್ಯ ಸೇರಿದಂತೆ ಇತರರಿದ್ದರು.