ಭಾರತವು ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದೆ
ಯಲಬುರ್ಗಾ: ಸಂವಿಧಾನ ದಿನ ಭಾರತೀಯರ ಪಾಲಿಗೆ ಹೆಮ್ಮೆಯ ಆಚರಣೆಯಾಗಿದೆ ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.
ಪಟ್ಟಣದ ಬುದ್ದ, ಬಸವ,ಅಂಬೇಡ್ಕರ್ ಭವನದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಭಾರತವು ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯ ಪಾಲಿಸಬೇಕು. ಸಂವಿಧಾನವು ಭಾರತೀಯರ ಅಭಿವ್ಯಕ್ತಿ ಸ್ವಾತಂತ್ರ್ಯೇ ಸಂರಕ್ಷಿಸಿ ಪ್ರಜಾತಂತ್ರ ವ್ಯವಸ್ಥೆಯ ನಾಡಿಮಿಡಿತವಾಗಿ ತನ್ನ ಮಹತ್ವ ಸಾರುತ್ತಿದೆ. ಜನಸಾಮಾನ್ಯರ ಹೃದಯ ಸ್ಪರ್ಶಿಸುವವರೆಗೂ ತೆಗೆದುಕೊಂಡು ಹೋಗಬೇಕು ಎನ್ನುವ ಹಿನ್ನೆಲೆಯಲ್ಲಿ ನ. ೨೬ರ ದಿನವನ್ನು ಸಂವಿಧಾನ ದಿನವನ್ನಾ ಆಚರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಡಾ. ಪ್ರಭುರಾಜ ಕೆ.ಎನ್.ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ನಾನಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾ ನಡೆಸಿದರು.