ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: 1949 ನವ್ಹೆಂಬರ್ 26 ರಂದು ಸಂವಿಧಾನವನ್ನು ನಮ್ಮ ದೇಶಕ್ಕೆ ಸಮರ್ಪಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ಇಂದು ಪ್ರತಿ ವರ್ಷ ನ.26ನ್ನು ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದು ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲ ರಿಜೇಶ ಪಿ.ಎನ್. ಹೇಳಿದರು.

ನಗರದ ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಂವಿಧಾನ ಎಂಬುದು ದೇಶದ ಜನರನ್ನು ಸಶಕ್ತಗೊಳಿಸಿ ಸರ್ವರಿಗೂ ಸಮಾನತೆ ಒದಗಿಸಿದೆ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನು ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ಹೇಳಿದರು.ಶೈಕ್ಷಣಿಕ ಕಾರ್ಯಸಂಯೋಜಕಿ ಕಮರಪಾರಾ ಖಾಜಿ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ದಾವುದಖಾನ, ಶಾಲೆಯ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.