ಸಾರಾಂಶ
ತರೀಕೆರೆ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ತರೀಕೆರೆಯಲ್ಲಿ ಸಂಭ್ರಮ ಸಡಗರದಿಂದ ನಡೆದ ಪ್ರಜಾಪ್ರಭುತ್ವ ದಿನಾಚರಣೆ । ಬೃಹತ್ ಮಾನವ ಸರಪಳಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಭಾನುವಾರ ಜಿಲ್ಲಾಡಳಿತ, ತಾಲೂಕು ಅಡಳಿತ, ತಾಪಂ, ವಿವಿಧ ಇಲಾಖೆಗಳು ಮತ್ತು ಪುರಸಭೆ ತರೀಕೆರೆ, ವಿವಿಧ ಸಂಘ ಸಂಸ್ಥಗಳು ಹಾಗು ಸಾರ್ವಜನಿಕರ ಸಹಯೋಗದಲ್ಲಿ ಪಟ್ಟಣದಲ್ಲಿ ಪ್ರಜಾುಪ್ಪಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಬೃಹತ್ ಮಾನವ ಸರಪಳಿ ರಚನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಜಾಪ್ರಭುತ್ವ ಉಳಿಸುವುದು ನಮ್ಮ ಕರ್ತವ್. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು, ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಲ್ಲಿ ತಾಲೂಕು ಅಡಳಿತ ಹಾಗೂ ಎಂಟು ಗ್ರಾಪಂ ಮತ್ತು ತರೀಕೆರೆ ಪುರಸಭೆಯಿಂದ ಕಾರ್ಯಕ್ರಮ ನಡೆದಿದೆ. 29 ಕಿ.ಮಿ.ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಐದು ಸಾವಿರ ಜನ ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಓದುವ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಹೇಳಿದರು.ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಪ್ರಜಾಪ್ರಭುತ್ವ ದಿನಾಚರಣೆ, ಬೃಹತ್ ಮಾನವ ಸರಪಳಿ ಕಾರ್ಯಕ್ರಮ ತರೀಕೆರೆ ಭಾಗದಲ್ಲಿ ಐತಿಹಾಸಿಕವಾಗಿ ನಡೆದಿದೆ. ಪ್ರಜಾತಂತ್ರ ವ್ಯವಸ್ಥೆ ಜನರಿಂದ ಜನರಿಗಾಗಿ ಇದೆ. ಪ್ರೀತಿ ವಿಶ್ವಾಸಗಳಿಸಬೇಕು, ಪ್ರಜಾಪ್ರಭುತ್ವ ಹಬ್ಬ ಅಚರಣೆ ದಿನನಿತ್ಯ ನಡೆಯಬೇಕು ಎಂದು ಹೇಳಿದರು.ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿ ಎಲ್ಲರೂ ಸಹೋದರತ್ವದಿಂದ ಬಾಳಬೇಕು, ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದ ಅವರು ಎಲ್ಲರಿಗೂ ಕೃತಜ್ಞತೆತಿಳಿಸಿದರು. ಪುರಸಭೆ ಅದ್ಯಕ್ಷ ವಸಂತಕುಮಾರ್, ಸದಸ್ಯರಾದ ಟಿ.ಜೆ.ಲೋಕೇಶ್, ರಂಗನಾಥ್, ಪುರಸಭೆ ನಾಮಿನಿ ಸದಸ್ಯರಾದ ವೇಣುಗೋಪಾಲ್, ಅದಿಲ್ ಪಾಷ, ಅಬ್ಬಾಸ್, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಎಂ.ನರೇಂದ್ರ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ತಹಸೀಲ್ದಾರ್ ವಿಶ್ವಜಿತ್ ಮೆಹೆತಾ, ಡಿವೈಎಸ್.ಪಿ. ಹಾಲುಮೂರ್ತಿರಾವ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ವೈದ್ಯಾಧಿಕಾರಿ ಡಾ.ಟಿ.ಎಂ.ದೇವರಾಜ್, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.ಸಂವಿಧಾನ ಪೀಠಿಕೆಯನ್ನು ಓದಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
15ಕೆಟಿಆರ್.ಕೆ.4ಃತರೀಕೆರೆಯಲ್ಲಿ ಪ್ರಜಾುಪ್ಪಭುತ್ವ ದಿನಾಚರಣೆ ಅಂಗವಾಗಿ ಏರ್ಪಾಡಾಗಿದ್ದ ಬೃಹತ್ ಮಾನವ ಸರಪಳಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಪುರಸಭೆ ಸದಸ್ಯ ಟಿ.ಜಿ.ಲೋಕೇಶ್, ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಮಾಜಿ ಪುರಸಭಾಧ್ಯಕ್ಷರಾದ ಟಿ.ಎಸ್.ಪ್ರಕಾಶ್ ವರ್ಮ, ಎಂ.ನರೇಂದ್ರ, ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮತ್ತಿತರರು ಇದ್ದರು.