ಸಾರಾಂಶ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ 75 ನೆಯ ಗಣರಾಜ್ಯೋತ್ಸವ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭಾರತರತ್ನ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ಜಾರಿಗೆ ಬಂದ ದಿನ ದೇಶದ ಪ್ರಜಾಪ್ರಭುತ್ವಕ್ಕೆಗಟ್ಟಿ ತಳಹದಿ ಸಿಕ್ಕಿತು ಎಂದು ಜಿಲ್ಲಾ ಬಿಜೆಪಿ ನಿಯೋಜಿತ ಅಧ್ಯಕ್ಷ ದೇವರಾಜ ಶೆಟ್ಟಿ ಹೇಳಿದರು.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ 75 ನೆಯ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು, ಸಂವಿಧಾನ ಅಧಿಕೃತವಾಗಿ ಜಾರಿಗೆ ಬಂದ ಈ ಪವಿತ್ರ ದಿನ. ಈ ದಿನ ನಾವೆಲ್ಲರೂ ಅಂಬೇಡ್ಕರ್, ಸಂವಿಧಾನ ಮತ್ತು ದೇಶದ ಪ್ರಗತಿಯನ್ನು ಅವಲೋಕಿಸಬೇಕು ಎಂದು ಸಲಹೆ ಮಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ದೇಶದ ಹಿರಿಮೆಯನ್ನು ಜಗತ್ತಿನಾದ್ಯಂತ ಕೊಂಡೊಯ್ದಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ದೇಶ ಅಭಿವೃದ್ಧಿ ಕಂಡಿದೆ. ಎಲ್ಲಾ ಜಾತಿ, ವರ್ಗದ ಜನರ ಬದುಕನ್ನು ಗಮನದಲ್ಲಿಟ್ಟುಕೊಂಡು ಅನುಷ್ಟಾನ ಗೊಂಡಿರುವ ವಿವಿಧ ಯೋಜನೆಗಳು ಇಂದು ಜಗತ್ತಿನ ಗಮನ ಸೆಳೆದಿವೆ. ತಮ್ಮ ಕಾರ್ಯ ಶೈಲಿ ಮತ್ತು ಪ್ರಗತಿಪರ ದೃಷ್ಟಿ ಯಿಂದ ಜಗತ್ತು ಭಾರತದತ್ತ ನೋಡುವಂತೆ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನರೇಂದ್ರ, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಜೆಸಿಂತಾ ಅನಿಲ್, ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ ಅರಸ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಜೇಮ್ಸ್ ಬೆನೆಡಿಕ್ಟ್, ಬಿಜೆಪಿ ಜಿಲ್ಲಾ ಸೋಸಿಯಲ್ ಮೀಡಿಯಾ ಅಧ್ಯಕ್ಷ ದಿನೇಶ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್, ನಗರಸಭೆ ಉಪಾಧ್ಯಕ್ಷ ಅಮೃತೇಶ್, ಗ್ರಾಮಾಂತರ ಎಸ್ಸಿ ಮೋರ್ಚಾ ಅಧ್ಯಕ್ಷ ಹಂಪಯ್ಯ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್ 27 ಕೆಸಿಕೆಎಂ 2