ಸಾರಾಂಶ
ಸೊರಬ: ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯನ್ನು ಒದಗಿಸಿದೆ ಅಲ್ಲದೇ ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕಿ ಎಂ.ಎಚ್.ಗೀತಾಂಜಲಿ ಹೇಳಿದರು.
ಸೊರಬ: ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯನ್ನು ಒದಗಿಸಿದೆ ಅಲ್ಲದೇ ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕಿ ಎಂ.ಎಚ್.ಗೀತಾಂಜಲಿ ಹೇಳಿದರು.ಮಂಗಳವಾರ ತಾಲೂಕಿನ ಸಮೀಪದ ಕೆಳದಿಯ ಮುರಾರ್ಜಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಭಾರತದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು, ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ತಿಳಿಸಿದರು.ಇದೇ ವೇಳೆ ಸಂವಿಧಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಮಕ್ಕಳಿಂದ ಸಂವಿಧಾನ ಬರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಎಚ್.ರತ್ನಮ್ಮ, ಶಿಕ್ಷಕಿಯರಾದ ಸಾವಿತ್ರಿ, ಕೆ.ವಿನೋದ, ಶಿಕ್ಷಕರಾದ ಗುರುರಾಜ, ಆನಂದ್, ಶ್ರೀನಿವಾಸ್, ಚೇತನ ದಾಸರ್, ಧರ್ಮರಾಜ್ , ಎಚ್.ಆರ್.ಲಕ್ಷ್ಮಿ , ನಿಲಯ ಪಾಲಕ ಟಿ.ವೈ.ವಿನಯ್, ರೂಪ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.